Advertisement
ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಸಿ ವರ್ಗಕ್ಕೆ ಸೇರಿಸಿದ್ದರೂ ಇತರೆ ಉಪಪಂಗಡದವರಿಗೂ ಪ.ಜಾತಿಯ ನಕಲಿ ಪ್ರಮಾಣಪತ್ರ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಯಾದಗಿರಿಯ ರಾಜ್ಯ ಎಸ್‌ಸಿ-ಎಸ್ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
Related Articles
Advertisement
ಅರ್ಜಿದಾರರು ಅತ್ಯಂತ ಗಂಭೀರ ವಿಚಾರ ಪ್ರಸ್ತಾಪಿಸಿದ್ದಾರೆ. ಅರ್ಜಿಯಲ್ಲಿ ಉಲ್ಲೇಖೀಸಿರುವ 60 ನಕಲಿ ಜಾತಿ ಪ್ರಮಾಣಪತ್ರ ಪಡೆದವರನ್ನು ಸೇರಿಸಿಕೊಂಡು ಈ ರೀತಿ ನಕಲಿ ಅಥವಾ ಅನರ್ಹ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡವರಿಗೆ ಒಂದು ವಾರದೊಳಗೆ ನೋಟಿಸ್ ನೀಡಬೇಕು, ಬಳಿಕ ಆದಷ್ಟು ಶೀಘ್ರ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸಬೇಕು. ಅದಕ್ಕೂ ಮೊದಲು ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಅಹವಾಲು ಹೇಳಲು ಅವಕಾಶ ನೀಡಬೇಕು ಎಂದು ಸರ್ಕಾರದ ವಿಶೇಷ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಏಪ್ರಿಲ್ 4ಕ್ಕೆ ಮುಂದೂಡಿತು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್, ಸಂವಿಧಾನಕ್ಕೆ ತಿದ್ದುಪಡಿ ತಂದು ನಾಯಕ ಜನಾಂಗದ ಉಪಪಂಗಡಗಳಾದ ಪರಿವಾರ ಮತ್ತು ತಳವಾರವನ್ನು ಎಸ್‌ಸಿ ವರ್ಗಕ್ಕೆ ಸೇರ್ಪಡೆ ಮಾಡಲಾಗಿದೆ. ಆದರೆ ರಾಜ್ಯದಲ್ಲಿ ಅಧಿಕಾರಿಗಳು ಒಬಿಸಿಗೆ ಸೇರಿದ ಇತರೆ ಉಪಪಂಗಡದವರಿಗೂ ಎಸ್‌ಸಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸುತ್ತಿದ್ದಾರೆ. ಆ ರೀತಿ 60ಕ್ಕೂ ಅಧಿಕ ನಕಲಿ ಜಾತಿ ಪ್ರಮಾಣಪತ್ರಗಳ ವಿವರಗಳನ್ನು ಅರ್ಜಿಯಲ್ಲಿ ಅಡಕ ಮಾಡಲಾಗಿದೆ. ಈ ರೀತಿ ನಕಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದವರು ಶೈಕ್ಷಣಿಕ, ಔದ್ಯೋಗಿಕ ಲಾಭ ಪಡೆಯುವುದರ ಜೊತೆಗೆ ಚುನಾವಣೆಗಳಿಗೂ ಸ್ಪರ್ಧಿಸುತ್ತಿದ್ದಾರೆ. ಆ ಮೂಲಕ ಅರ್ಹ ಎಸ್‌ಟಿ ವರ್ಗಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದು ಸಾಮಾಜಿಕ ನ್ಯಾಯವನ್ನು ಬುಡಮೇಲು ಮಾಡುತ್ತಿದೆ ಎಂದು ವಿವರಿಸಿದರು.