Advertisement

ನಗ್ನ ಚಿತ್ರ :ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ಅರ್ಜಿ

10:06 PM Jul 25, 2022 | Team Udayavani |

ಮುಂಬಯಿ: ಸಾಮಾಜಿಕ ಮಾಧ್ಯಮದಲ್ಲಿ ತನ್ನ ನಗ್ನ ಛಾಯಾಚಿತ್ರಗಳ ಮೂಲಕ “ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿರುವ” ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಮುಂಬಯಿ ಪೊಲೀಸರಿಗೆ ಸೋಮವಾರ ಅರ್ಜಿ ಸಲ್ಲಿಸಲಾಗಿದೆ.

Advertisement

ಪೂರ್ವ ಮುಂಬಯಿ ಉಪನಗರದಲ್ಲಿರುವ ಎನ್‌ಜಿಒ ಪದಾಧಿಕಾರಿಯೊಬ್ಬರು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ದೂರು ಅರ್ಜಿ ಸಲ್ಲಿಸಿದ್ದಾರೆ. ನಟ ತನ್ನ ಛಾಯಾಚಿತ್ರಗಳ ಮೂಲಕ ಮಹಿಳೆಯರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಮತ್ತು ಅವರ ನಮ್ರತೆಗೆ ಅವಮಾನ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಟನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರುದಾರರು ಒತ್ತಾಯಿಸಿದ್ದಾರೆ.

“ಸೋಮವಾರ ಎನ್‌ಜಿಒಗೆ ಸಂಬಂಧಿಸಿದ ವ್ಯಕ್ತಿಯಿಂದ ನಾವು ಅರ್ಜಿಯನ್ನು ಸ್ವೀಕರಿಸಿದ್ದೇವೆ. ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ನಾವು ವಿಚಾರಿಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next