Advertisement

ಕಾಮಗಾರಿ ಪೂರ್ಣಗೊಳಿಸದಿದ್ದರೆ ಕ್ರಮ: ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ

05:33 PM Aug 17, 2021 | Team Udayavani |

ತುಮಕೂರು: ಜಿಲ್ಲೆಯಲ್ಲಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ ಬಿಡುಗಡೆಯಾಗುವ ಅನುದಾನವನ್ನು ಕಳೆದ ಸಾಲಿನಿಂದ ಬಾಕಿ ಉಳಿದು ಮುಂದುವರಿದಿರುವ ಕಾಮಗಾರಿ ಪೂರ್ಣಗೊಳಿಸಲು ಆದ್ಯತೆ ನೀಡಬೇಕು. ಉಳಿದ ಅನುದಾನದಲ್ಲಿ ಹೊಸ ಕಾಮಗಾರಿ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್‌ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಡಿಪಿಯಡಿ 61 ಮುಂದುವರಿದ ಕಾಮಗಾರಿಗಳಿದ್ದು, ಸದರಿ ಕಾಮಗಾರಿ ಪೂರ್ಣಗೊಳಿಸದಿರಲು ಸಕಾರಣ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಒಂದೇ ಕಾಮಗಾರಿಯನ್ನು ಗ್ರಾಮ ಪಂಚಾಯಿತಿಯಿಂದ ಹಾಗೂ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ ಕೈಗೆತ್ತಿಕೊಳ್ಳದಂತೆ ಎಚರಿಕೆ ‌c ವಹಿಸಬೇಕು. ಹೊಸ ಕೊಳವೆ ಬಾವಿ ಕೊರೆಯುವ ಸಂಖ್ಯೆ ಕಡಿಮೆ ಮಾಡಿ ಹಳೆಯ ಕೊಳವೆ ಬಾವಿಗಳನ್ನು ಪುನಶ್ಚೇತನ ಗೊಳಿಸಬೇಕೆಂದು ಸೂಚನೆ ನೀಡಿದರು.

ಇದನ್ನೂ ಓದಿ:ತಾಲಿಬಾನ್ ಕ್ರೌರ್ಯಕ್ಕೆ ಬೆಚ್ಚಿದ ಅಫ್ಗಾನ್ : ಭಯದಲ್ಲಿ ಬೆಂದು ಹೋಗುತ್ತಿವೆ ಹೆಣ್ಣು ಜೀವಗಳು  

ಎಂಜನಿಯರ್‌ ಕಾರ್ಯಪ್ರವೃತ್ತರಾಗಲಿ:
ಕೆಟ್ಟು ಹೋದ ಪಂಪು-ಮೋಟಾರ್‌ಗಳನ್ನು ಸರಿಪಡಿಸಿ ಮರುಬಳಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಸಾಕಷ್ಟು ದೂರುಗಳು ಬರುತ್ತಿದ್ದು, ಕುಡಿಯುವ ನೀರಿಗೆ ಸಂಬಂಧಿಸಿದ ದೂರು ಸ್ವೀಕರಿಸಿದ ಕೂಡಲೇ ಎಂಜನಿಯರ್‌ಗಳು ಕಾರ್ಯ ಪ್ರವೃತ್ತರಾಗಬೇಕೆಂದು ತಿಳಿಸಿದರು.

Advertisement

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಕೆ. ಮುತ್ತಪ್ಪ ಮಾತನಾಡಿ, ಲೆಕ್ಕ ಶಿರ್ಷಿಕೆ 4215ರ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ ಜಿಲ್ಲೆಯ ಕುಣಿಗಲ್‌ ತಾಲೂಕಿಗೆ 3.89 ಕೋಟಿ ರೂ., ಮಧುಗಿರಿ-4.79 ಕೋಟಿ ರೂ., ಗುಬ್ಬಿ- 5.97 ಕೋಟಿ ರೂ., ಶಿರಾ-4.97 ಕೋಟಿ ರೂ., ಪಾವಗಡ-5.16ಕೋಟಿರೂ., ತುರುವೇಕೆರೆ- 2.58ಕೋಟಿರೂ., ಕೊರಟಗೆರೆ- 3.13ಕೋಟಿ ರೂ. ಹಾಗೂ ಚಿಕ್ಕನಾಯಕನಹಳ್ಳಿ-3.13 ಕೋಟಿ ರೂ. ಸೇರಿದಂತೆ ಒಟ್ಟು33.65 ಕೋಟಿ ರೂ.ಗಳಿಗೆ ಕ್ರಿಯಾಯೋಜನೆ ತಯಾರಿಸಲು ಸಲ್ಲಿಸಲಾಗುವುದು ಎಂದರು.

744 ಹೊಸ ಕಾಮಗಾರಿ: ಪ್ರಸಕ್ತ ಸಾಲಿನಲ್ಲಿ ಎಸ್‌ಡಿಪಿಯಡಿ 61 ಮುಂದುವರಿದ ಕಾಮಗಾರಿ, 9 ವಿದ್ಯುತ್‌ ಸಂಪರ್ಕ, 6 ಬರ ಕಾಮಗಾರಿ, 64 ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಕಾಮಗಾರಿ, 744 ಹೊಸ ಕಾಮಗಾರಿ ಸೇರಿದಂತೆ ಒಟ್ಟು884 ಕಾಮಗಾರಿ ಕೈಗೊಳ್ಳಲು 33.65 ಕೋಟಿ ರೂ.ಗಳನ್ನು ನಿಗದಿಪಡಿಸಿ ಕ್ರಿಯಾ ಸಲ್ಲಿಸಲಾಗುವುದೆಂದು ಸಭೆಗೆ ಮಾಹಿತಿ ನೀಡಿದರು. ಗ್ರಾಮೀಣನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಎಂಜಿಯರ್‌ ಮಮತಾ, ರಮೇಶ್‌, ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್‌ ಜಿಲ್ಲಾ ಮಟ್ಟದ ಸಮಿತಿ ಸದಸ್ಯ ಡಿಡಿಪಿಐ ಸಿ.ನಂಜಯ್ಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಭಾಗ್ಯಮ್ಮ, ವಾರ್ತಾ ಇಲಾಖೆಯ ರೂಪಕಲಾ ಎಲ್ಲ ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಇದ್ದರು.

ಕ್ರಿಯಾಯೋಜನೆ ತಯಾರಿಸಲು ನಿರ್ಧಾರ
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರಸಕ್ತ ಸಾಲಿಗಾಗಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ 33.65 ಕೋಟಿ ರೂ.ಗಳನ್ನು ನಿಗದಿಪಡಿಸಿ ಕ್ರಿಯಾಯೋಜನೆ ತಯಾರಿಸಲು ನಿರ್ಧರಿಸಲಾಗಿದೆ ಎಂದು ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು.

ಯಾವುದೇ ಕಾಮಗಾರಿಯಾಗಲಿ ಅಗತ್ಯಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳದೆ ವಿನಾಕಾರಣ ಮುಂದೂಡದೆ, ಎಲ್ಲ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸ ಬೇಕು. ಕಾಮಗಾರಿ ನಿಧಾನಗತಿಯಲ್ಲಿ ಸಾಗಲು ಕಾರಣ ಏನೆಂಬುದನ್ನು ತಿಳಿದು ಸಮಸ್ಯೆಗಳ ಪರಿಹಾರಕ್ಕೆ
ಸೂಕ್ತ ಕ್ರಮಕೈಗೊಳ್ಳಬೇಕು.
-ಡಾ.ಕೆ.ವಿದ್ಯಾಕುಮಾರಿ, ಜಿಪಂ
ಮುಖ್ಯ ಕಾರ್ಯ ನಿರ್ವಹಣಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next