Advertisement
ಪಂಚಮಸಾಲಿ ಜನಾಂಗವನ್ನು 2ಎಗೆ ಸೇರಿಸಬೇಕು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಯಬಸವ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಸಮಾಜದ ಇತರ ಮುಖಂಡರು ಇಟ್ಟ ಬೇಡಿಕೆಗೆ ತಮ್ಮ ಭಾಷಣದಲ್ಲಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಜಾತಿಯನ್ನು ಪ್ರವರ್ಗದ ಪಟ್ಟಿಗೆ ಸೇರಿಸಬೇಕಾದರೆ,
Related Articles
Advertisement
ಈಗ ನಮ್ಮ ಸರ್ಕಾರ ಬಂದ ಮೇಲೆ ಕೂಡಲಸಂಗಮ ಕ್ಷೇತ್ರದ ಅಭಿವೃದ್ಧಿಗೆ 250 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಮಠಗಳು, ಧಾರ್ಮಿಕ ಕ್ಷೇತ್ರಗಳು ನಡೆಸುವ ಶಿಕ್ಷಣ ಸಂಸ್ಥೆಗಳು ಮತ್ತು ಇನ್ನಿತರ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನ ನೀಡುವುದನ್ನು “ರಾಜಕೀಯ ಕನ್ನಡಕ’ದಿಂದ ನೋಡಬಾರದು ಎಂದು ಇದೇ ವೇಳೆ ಸಿದ್ದರಾಮಯ್ಯ ಹೇಳಿದರು.
ಇದಕ್ಕೂ ಮೊದಲು ಮಾತನಾಡಿದ ಜಯಬಸವ ಮೃತ್ಯುಂಜಯ ಸ್ವಾಮೀಜಿ, ಸಚಿವ ವಿನಯ್ ಕುಲಕರ್ಣಿ, ಮಾಜಿ ಸಚಿವ ಮುರಗೇಶ ನೀರಾಣಿ, ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಪಂಚಮಸಾಲಿ ಜನಾಂಗವನ್ನು 2ಎ ಗೆ ಸೇರಿಸಬೇಕು. ಇಂಗ್ಲೆಂಡ್‌ನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ ಖಡ್ಗವನ್ನು ವಾಪಸ್ ತರಿಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೋಳ್ಳಿ ರಾಯಣ್ಣನ ಪ್ರತಿಮೆಯನ್ನು ವಿಧಾನಸೌಧದ ಮುಂದೆ ಸ್ಥಾಪಿಸಬೇಕು.
ಬೈಲಹೊಂಗಲದ ಚೆನ್ನಮ್ಮ ಸಮಾಧಿ ಮತ್ತು ರಾಯಗಢದಲ್ಲಿರುವ ಸಂಗೊಳ್ಳಿ ರಾಯಣ್ಣ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಬೇಕು. ಧಾರವಾಡದ ಕರ್ನಾಟಕ ಕಾನೂನು ವಿವಿಗೆ ಸರ್ ಸಿದ್ದಪ್ಪ ಕಾಂಬ್ಳೆ ಹೆಸರಿಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.
ಇತಿಹಾಸ ಬದಲಿಸಬೇಕು: ಈ ವೇಳೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭವಾಗಿದ್ದು 1857 ಎಂದು ಇತಿಹಾಸಕಾರರು ಹೇಳುತ್ತಾರೆ. ಆದರೆ, ಅಸಲಿಗೆ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು 1824ರಲ್ಲಿ ಅದು ನಮ್ಮ ನಾಡಿನ ಕಿತ್ತೂರಿನಲ್ಲಿ ರಾಣಿ ಚೆನ್ನಮ್ಮನ ಮೂಲಕ. ಹಾಗಾಗಿ ಇತಿಹಾಸವನ್ನು ಬದಲಿಸಬೇಕಾಗಿದೆ.
ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ದಿಟ್ಟ ನಿಲುವು ಕೈಗೊಳ್ಳಲಿದೆ ಎಂದರು. ಅಲ್ಲದೇ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅಧ್ಯಯನ ಪೀಠಗಳನ್ನು ಸ್ಥಾಪಿಸಲಾಗಿದ್ದು, ಕಟ್ಟಡ ನಿರ್ಮಾಣಕ್ಕಾಗಿ 5 ಕೋಟಿ ಮತ್ತು ಸಂಶೋಧನೆ ಮತ್ತು ಅಧ್ಯಯನ ಚಟುವಟಿಕೆಗಳಿಗೆ ಪ್ರತಿ ವರ್ಷ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.
ನಿರಾಣಿ ಕಾಲೆಳೆದ ಸಿಎಂ: ಮಾಜಿ ಸಚಿವ ಮುರಗೇಶ ನಿರಾಣಿ ಮಾತನಾಡುತ್ತ, “ನಿಮ್ಮ ಸರ್ಕಾರದ ಅವಧಿ ಇನ್ನು 6 ತಿಂಗಳು ಮಾತ್ರ ಇದೆ. ಅದಕ್ಕಾಗಿ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ವಿಧಾನಸೌಧದ ಮುಂದೆ ಸ್ಥಾಪಿಸಲು ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು. ಇದಕ್ಕೆ ವಾಜಪೇಯಿ ಪ್ರಧಾನಿ ಆಗಿದ್ದಾಗ, ಆಗ ಕೇಂದ್ರ ಸಚಿವರಾಗಿದ್ದ ಬಸವನಗೌಡ ಪಾಟೀಲ್ ಯತ್ನಾಳ ಅವರ ಪ್ರಯತ್ನದಿಂದ ಪಾರ್ಲಿಮೆಂಟ್‌ನಲ್ಲಿ ರಾಣಿ ಚೆನ್ನಮ್ಮ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಉದಾಹರಣೆ ಕೊಟ್ಟರು.
ಇದಕ್ಕೆ ತಮ್ಮ ಭಾಷಣದಲ್ಲಿ ತಿರುಗೇಟು ನೀಡಿದ ಸಿದ್ದರಾಮಯ್ಯ, ನಿಮಗೆ ಅನುಮಾನ ಬೇಡ, ಮುಂದಿನ ಬಾರಿಯೂ ಜನ ನಮಗೇನೆ ಅವಕಾಶ ಕೊಡುತ್ತಾರೆ. ಅಷ್ಟಕ್ಕೂ ಪಾರ್ಲಿಮೆಂಟ್‌ನಲ್ಲಿ ರಾಣಿ ಚೆನ್ನಮ್ಮಳ ಪ್ರತಿಮೆ ಸ್ಥಾಪಿಸಿದ್ದು, ಮನಮೋಹನ್‌ಸಿಂಗ್ ಅವರು ಪ್ರಧಾನಿ ಆಗಿದ್ದಾಗ, ಶಿವರಾಜಪಾಟೀಲ್ ಗೃಹ ಸಚಿವರಾಗಿದ್ದಾಗ 2007ರಲ್ಲಿ ಆಯಿತು. ಜಯಬಸವ ಮೃತ್ಯುಂಜಯ ಸ್ವಾಮೀಜಿ ಇದಕ್ಕೆ ಸಾಕ್ಷಿ ಇದ್ದಾರೆ. ನೀವು ಏನೇ ಹೇಳಬಹುದು.
ಆದರೆ, ವಾಸ್ತವವನ್ನು ಮರೆಮಾಚಲು ಸಾಧ್ಯವಿಲ್ಲ ಎಂದರು. ಕಾರ್ಯಕ್ರಮದಲ್ಲಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಮಹಸ್ವಾಮಿ, ಸಚಿವರಾದ ಎಂ.ಬಿ. ಪಾಟೀಲ್, ಉಮಾಶ್ರೀ, ರೋಷನ್‌ಬೇಗ್, ಎಚ್.ಎಂ. ರೇವಣ್ಣ, ಸಂಸದರಾದ ಪ್ರಕಾಶ್ ಹುಕ್ಕೇರಿ, ಕರಡಿ ಸಂಗಣ್ಣ, ಶಾಸಕಅಪ್ಪಾಜಿ ನಾಡಗೌಡ, ವಿಧಾನಪರಿಷತ್ ಸದಸ್ಯ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ವಿಧಾನಪರಿಷತ್ ಸದಸ್ಯ ಡಾ. ಎಂ.ಪಿ. ನಾಡಗೌಡ ಮತ್ತಿತರರು ಇದ್ದರು.