Advertisement

ವಿಜಯಪುರ ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ : ಸಿ.ಸಿ.ಪಾಟೀಲ

08:18 AM Sep 28, 2019 | Team Udayavani |

ವಿಜಯಪುರ: ಐತಿಹಾಸಿಕವಾಗಿ ನೂರಾರು ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

Advertisement

ನಗರದ ಬೇಗಂ ತಲಾಬ್ ಕೆರೆಯಲ್ಲಿ ಬೋಟಿಂಗ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಪ್ರವಾಸೋದ್ಯಮ ಕ್ಕೆ ಕಳೆದ 17 ವರ್ಷಗಳಿಂದ ಉಪ ನಿರ್ದೇಶಕರೇ ಇಲ್ಲವಾಗಿ ಪ್ರಭಾರಿಗಳಿಂದ ನಡೆಯುವ ವಿಷಯ ನನ್ನ‌ಗಮನಕ್ಕೆ ಬಂದಿದೆ. ಈ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ. ಇದಲ್ಲದೇ ವಿಜಯಪುರ ಜಿಲ್ಲೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವೃತ ಕಛೇರಿ ಆರಂಭಿಸುವ ಕುರಿತು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಭರವಸೆ ನೀಡಿದರು.

ಜಿಲ್ಲೆಯ ಪ್ರವಾಸೋದ್ಯಮ ಬಲವರ್ಧನೆ ಭಾಗವಾಗಿ ಐತಿಹಾಸಿಕ ಬೇಗಂ ತಲಾಬ್ ಕೆರೆಯನ್ನು 10 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತಿ, ಕೃಷ್ಣಾ ನದಿಯಿಂದ ಕೆರೆಗೆ ನೀರು ತುಂಬಿಸುವ ಯೋಜನೆಯಲ್ಲಿ ಹೂಳು ಎತ್ತಿ, ನೀರು ತುಂಬಿಸಲಾಗಿದೆ. ಇದಲ್ಲದೇ ಕೆರೆ ಪ್ರದೇಶದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ 11 ರೂ. ವೆಚ್ಚದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದೀಗ ಸದರಿ ಕೆರೆಯಲ್ಲಿ ದೋಣಿ ವಿಹಾರ ಸೌಲಭ್ಯ ಕಲ್ಪಿಸುವ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.

ವಿಜಯಪುರ ನಗರ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next