Advertisement

ಪರಿಶಿಷ್ಟ ಜಾತಿ, ಪಂಗಡದವರ ಸಮಸ್ಯೆ ಇತ್ಯರ್ಥಕ್ಕೆ ಕ್ರಮ: ಡಿಸಿ

01:20 AM Apr 09, 2022 | Team Udayavani |

ಮಂಗಳೂರು: ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನಾಂಗದವರ ಸಮಸ್ಯೆಗಳ ಇತ್ಯರ್ಥಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Advertisement

ಅವರು ನಗರದ ಉರ್ವಾ ಸ್ಟೋರ್‌ನಲ್ಲಿರುವ ಅಂಬೇಡ್ಕರ್‌ ಭವನದಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ / ಪಂಗಡದದವರ ವಿದ್ಯಾರ್ಥಿವೇತನ ಕಾಲಕಾಲಕ್ಕೆ ಸಂದಾಯವಾಗ ಬೇಕು. ಸರಕಾರಿ ಸೌಲಭ್ಯಗಳನ್ನು ವಿಳಂಬಿಸದೆ ಮಂಜೂರು ಮಾಡಬೇಕೆಂದು ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಸಾರ್ವಜನಿಕವಾಗಿ ಅಥವಾ ಖಾಸಗಿಯಾಗಿ ಜಾತಿ ನಿಂದನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳ ಬೇಕು; ಪರಿಶಿಷ್ಟ ಜಾತಿ/ಪಂಗಡದ ಜನರು ನೀಡುವ ದೂರುಗಳಿಗೆ ಪೊಲೀಸ್‌ ಅಧಿಕಾರಿ
ಗಳು ಸೂಕ್ತವಾಗಿ ಸ್ಪಂದಿಸ ಬೇಕು ಎಂದರು.

ಇದನ್ನೂ ಓದಿ:ಡಿಆರ್‌ಡಿಒದ ಕ್ಷಿಪಣಿ ಛೇದನ ಪರೀಕ್ಷೆ ಯಶಸ್ವಿ : ರಕ್ಷಣ ಸಚಿವರಿಂದ ಅಭಿನಂದನೆ 

ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನಾಂಗದವರಿಗೆ ಸಾಂಸ್ಕೃತಿಕ ಸಮಾರಂಭ ಸಹಿತ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಉರ್ವಾಸ್ಟೋರ್‌ನಲ್ಲಿರುವ ಅಂಬೇಡ್ಕರ್‌ ಭವನದಲ್ಲಿ ಸಬ್ಸಿಡಿ ದರದಲ್ಲಿ ಅವಕಾಶ ಕಲ್ಪಿಸಿ ಕೊಡಲಾಗುವುದು. ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಈ ಜನಾಂಗದವರಿಗೆ ವೈದ್ಯಕೀಯ ಸೌಲಭ್ಯಗಳನ್ನು ನಿರಾಕರಿಸುವ ಆಸ್ಪತ್ರೆ ಹಾಗೂ ವೈದ್ಯರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

Advertisement

ಜಿ.ಪಂ. ಸಿಇಒ ಡಾ| ಕುಮಾರ್‌, ಜಿಲ್ಲಾ ಎಸ್‌ಪಿ ಹೃಷಿಕೇಶ್‌ ಭಗವಾನ್‌ ಸೋನಾವಣೆ, ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗೇಶ್‌ ಬೇವಿನಮಟ್ಟಿ, ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿ ಡಾ| ದಿನೇಶ್‌ ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next