ಬೆಂಗಳೂರು: ಪ್ರಾಥಮಿಕ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ 6,500 ಕ್ಕೂ ಹೆಚ್ಚು ಕೊಠಡಿಗಳ ನಿರ್ಮಾಣ ಕಾರ್ಯವನ್ನು ಅಂದಾಜು 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
2022-23ನೇ ಸಾಲಿನ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗುರುವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಶಿಕ್ಷಣ ಇಲಾಖೆ ಸಭೆಯಲ್ಲಿ ಸಿಎಂ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಕೊಠಡಿಗಳ ಸಂಖೆ ಕಡಿಮೆ ಇದೆ. ಇದ್ದರೂ ಅಚುÌಕಟ್ಟಾದ ಮತು ವ್ಯವಸ್ಥಿತ ಕೊಠಡಿಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಸರಕಾರಿ ಶಾಲೆಗಳಲ್ಲಿ ಪೂರ್ಣಪ್ರಮಾಣದ ಮತ್ತು ಸುಸಜ್ಜಿತ ಕೊಠಡಿಗಳ ನಿರ್ಮಾಣ ಮಾಡುವಂತೆ ಸೂಚಿಸಿದ್ದಾರೆ.
ರಾಜ್ಯದ ಸರಕಾರಿ ಶಾಲೆಗಳಲ್ಲಿನ ಮೂಲ ಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಒದಗಿಸಲಾಗುವುದು. ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ.ಅನಂತರ ಎಸ್‌ಜಿಪಿ ಗೆ 2ನೇ ಆದ್ಯತೆ ಹಾಗೂ ನಾನ್ ಎಸ್‌ಜಿಪಿ ಗಳಿಗೆ 3 ನೇ ಆದ್ಯತೆ ನೀಡುವುದು. ಕೆಕೆಆರ್‌ಡಿಬಿ ವ್ಯಾಪ್ತಿಯಲ್ಲಿ 32 ಆಕಾಂಕ್ಷಿ ತಾಲೂಕುಗಳಿದ್ದು, ಅವುಗಳ ಅಭಿವೃದ್ಧಿಗೆ ಆದ್ಯತೆ. ಕ್ಷೇತ್ರವಾರು ಅಭಿವೃದ್ಧಿಗೊಳಿಸುವ ಶಾಲೆಗಳ ಸಂಖ್ಯೆಯನ್ನು ನಿಗದಿಪಡಿಸಿ, ಈ ಯೋಜನೆಯಡಿ ನಿರ್ಮಾಣವಾಗುವ ಶಾಲಾ ಕಟ್ಟಡಗಳು ಏಕರೂಪದ ಮಾದರಿ ಹಾಗೂ ಬಣ್ಣವನ್ನು ಹೊಂದಿರುವುದು ಹಾಗೂ ಈ ಕಟ್ಟಡಗಳಿಗೆ ಒಂದೇ ಹೆಸರು ಇಡುವಂತೆ ಅವರು ಸೂಚಿಸಿದ್ದಾರೆ.
ಶಾಲೆಗಳಲ್ಲಿ ನ್ಪೋಕನ್ ಇಂಗ್ಲೀಷ್ ಕಲಿಸಲು ಶಿಕ್ಷಕರ ಸೇವೆ, ಅರೆಕಾಲಿಕ ಶಿಕ್ಷಕರು, ಲ್ಯಾಬ್ ಸಿಬಂದಿ ಹಾಗೂ ಸಾರಿಗೆ ವ್ಯವಸ್ಥೆಯನ್ನು ಸಿಎಸ್‌ಆರ್ ಸಹಯೋಗದಲ್ಲಿ ಮಾಡಬಹುದಾಗಿದೆ. 20,000 ಅಂಗನವಾಡಿಗಳಲ್ಲಿ ಜುಲೈ ಮೊದಲನೆ ವಾರದಿಂದ ನೂತನ ಪಠ್ಯಕ್ರಮ ಜಾರಿಗೊಳಿಸುವಂತೆ ಸೂಚಿಸಿದರು.
ಶಾಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಒದಗಿಸಲು ಪ್ರತೀ ತಾಲೂಕಿಗೆ 4 ರಿಂದ 5 ಬಸ್‌ಗಳ ಖರೀದಿಗೆ ಶಾಸಕರಿಗೆ ಅನುಮತಿ ನೀಡಲಾಗುವುದು.
ಅಕ್ಟೋಬರ್ 2: ಯಶಸ್ವಿನಿ ಉದ್ಘಾಟನೆ :
ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.