Advertisement

ಹೊಸತೊಡಕು- ಶಾಂತಿಯುತವಾಗಿ ಹಬ್ಬ ಆಚರಿಸಲು ಕ್ರಮ: ಸಿಎಂ ಬೊಮ್ಮಾಯಿ

03:18 PM Apr 02, 2022 | Team Udayavani |

ಬೆಂಗಳೂರು: ಹೊಸ ತೊಡಕು ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದ ರೀತಿಯಲ್ಲಿ ಅವರವರ ಹಬ್ಬಗಳ ಆಚರಣೆಯಾಗಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಹಾಲಾಲ್ ವಿರುದ್ಧ ಹಿಂದೂ ಸಂಘಟನೆಗಳು ಭಿತ್ತಿಪ್ರತ್ರ ಹಂಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಶಾಂತಿ ಸಭೆಗಳನ್ನು ನಡೆಸಿ ಶಾಂತಿಯುತವಾಗಿ ಹಬ್ಬ ಆಚರಿಸಲು ಉತ್ತಮ ವಾತಾವರಣ ನಿರ್ಮಿಸಲು ಸೂಚಿಸಲಾಗಿದೆ ಎಂದರು.

ಇದನ್ನೂ ಓದಿ:ಬೆದರಿಕೆ ಹಿನ್ನೆಲೆ ಅಣ್ಣಾಮಲೈ ಗೆ ಭದ್ರತೆ ಹೆಚ್ಚಿಸಿದ ಕೇಂದ್ರ ಗೃಹ ಸಚಿವಾಲಯ

Advertisement

Udayavani is now on Telegram. Click here to join our channel and stay updated with the latest news.

Next