Advertisement
ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜನಸ್ಪಂದನ ಸಭೆಯಲ್ಲಿ ರೈತ ಮುಖಂಡ ಭೂತಯ್ಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ಅವರು, ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಹಾಗೂವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಎಲ್ಲ ಕೆರೆಗಳ ವ್ಯಾಪ್ತಿ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಅಳತೆಮಾಡಿಸಲಾಗುವುದು. ಒಂದು ವೇಳೆ ಒತ್ತುವರಿಕಂಡುಬಂದಲ್ಲಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
Related Articles
Advertisement
ಜನಸ್ಪಂದನ ಸಭೆಗೆ ಆಗಮಿಸಿದ್ದ ಬಿ.ಎಸ್. ವೀರೇಶ್ ಎನ್ನುವವರು ತಾವು ಉಜ್ವಲಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್‌ಪಡೆದುಕೊಂಡಿದ್ದೇವೆ. ತಮ್ಮ ಕುಟುಂಬ ಇದೀಗ ಚಿತ್ರದುರ್ಗದಿಂದ ಚಳ್ಳಕೆರೆಗೆ ಸ್ಥಳಾಂತರಗೊಂಡಿದೆ. ಗ್ಯಾಸ್ ಏಜೆನ್ಸಿಯವರು ಸಿಲಿಂಡರ್ ಅನ್ನು ಚಳ್ಳಕೆರೆಗೆ ವರ್ಗಾವಣೆ ಮಾಡಿಕೊಡುತ್ತಿಲ್ಲ ಎಂದು ದೂರುನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು,ಸಮಸ್ಯೆಯನ್ನು ಕೂಡಲೆ ಪರಿಹರಿಸಿ. ಸಿಲಿಂಡರ್ ಅನ್ನುಚಳ್ಳಕೆರೆಗೆ ವರ್ಗಾಯಿಸಿಕೊಂಡುವಂತೆ ನಗರಸಭೆಪೌರಾಯುಕ್ತರಿಗೆ ಸೂಚನೆ ನೀಡಿದರು.
ಚಿತ್ರದುರ್ಗದ ತಿಪ್ಪಮ್ಮ ಎಂಬುವವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ನಗರಸಭೆಯಲ್ಲಿ ಅಕ್ರಮವಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವವರದಾಖಲೆ ಪರಿಶೀಲಿಸಿ ಸೇವೆಯಿಂದ ಅಮಾನತು? ಮಾಡುವಂತೆ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಅಕ್ರಮವಾಗಿ ಸರ್ಕಾರಿ ಸೇವೆ ಸಲ್ಲಿಸುತ್ತಿರುವವರ ವಿರುದ್ಧ ತನಿಖೆ ಕೈಗೊಂಡು ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದರು.
ಚಿತ್ರದುರ್ಗ ಆರ್. ವೆಂಕಟೇಶ್ ಅವರು ತೋಟಗಾರಿಕೆ ಇಲಾಖೆಯಲ್ಲಿ ಕಾಳು ಮೆಣಸಿನ ಬೆಳೆಗೆ ಸಹಾಯಧನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು. ವೆಂಕಟೇಶ್ವರಸ್ವಾಮಿ ದೇವಾಲಯದ ಸಮಿತಿ ಸದಸ್ಯರು ಹಿರೇಹಳ್ಳಿ ಗೊಲ್ಲರ ಕಪಿಲೆಯ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಸ್ಥಳಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದರು.