Advertisement

ರಸ್ತೆ ಗುಂಡಿ ಮುಚ್ಚಲು ಕ್ರಮ

03:42 PM May 26, 2019 | Team Udayavani |

ತುಮಕೂರು: ಜಿಲ್ಲಾ ವ್ಯಾಪ್ತಿಯಲ್ಲಿರುವ ರಸ್ತೆಗಳಲ್ಲಿ ಇರುವ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಲೋಕೋಪ ಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‌ ಕುಮಾರ್‌ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಜಿಲ್ಲಾ ವ್ಯಾಪ್ತಿಯ ರಸ್ತೆಗಳಿಗೆ ರಸ್ತೆ ಉಬ್ಬುಗಳಿಗೆ ಬಣ್ಣ ಹಚ್ಚುವ, ಸೂಚನೆ ಫ‌ಲಕಗಳನ್ನು ಹಾಕುವ, ಟ್ರಾಫಿಕ್‌ ಚಿಹ್ನೆಗಳ ಫ‌ಲಕಗಳನ್ನು ನಿಲ್ಲಿಸುವ ಮತ್ತಿತರ ಮೂಲ ಸೌಕರ್ಯ ಒದಗಿಸಬೇಕು. ಅಲ್ಲದೆ, ಡಿವೈಡರ್‌ಗಳನ್ನು ವೈಜ್ಞಾನಿಕವಾಗಿ ನಿರ್ಮಿಸಿ ಅವುಗಳಿಗೆ ಬಣ್ಣ ಹಚ್ಚಬೇಕು. ವಾಹನಗಳು ಮುಖ್ಯ ರಸ್ತೆಯಿಂದ ಸೇವಾ ರಸ್ತೆಗೆ ಬರುವ ಮಾರ್ಗದಲ್ಲಿ ಕಡ್ಡಾಯವಾಗಿ ಚಿಹ್ನೆಗಳನ್ನು ಪ್ರದರ್ಶಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಸ್ತೆ ನಿಯಮದ ಅರಿವು ಮೂಡಿಸಿ: ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಶಾಲಾ- ಕಾಲೇಜಿನ ವಿದ್ಯಾರ್ಥಿಗಳು, ಕಾರ್ಮಿಕರು, ಕೂಲಿ ಕಾರ್ಮಿಕರು, ಗಾರ್ಮೆಂಟ್ಸ್‌ ನೌಕ ರರು ಹಾಗೂ ಸಾರ್ವಜನಿಕರಿಗೆ ಅರಿವು ಕಾರ್ಯ ಕ್ರಮಗಳನ್ನು ಏರ್ಪಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು.

ಅಪಘಾತ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಯಾವುದೇ ಒತ್ತಡಕ್ಕೆ ಮಣಿಯದೇ ಮದ್ಯ ಪಾನ ಮಾಡಿ ವಾಹನ ಚಲಾಯಿಸುವವರು, ವಾಹನ ಚಲಾಯಿಸುವಾಗ ಮೊಬೈಲ್ ಫೋನ್‌ ಬಳಕೆ ಮಾಡುವ ಹಾಗೂ ಹೆಲ್ಮೆಟ್ ಧರಿಸದೇ ಇರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ ನೋಂದಣಿಯನ್ನು ರದ್ದು ಪಡಿಸಬೇಕು. ಅಜಾಗರೂಕ ವಾಹನ ಚಾಲನೆ ಮಾಡುವವರ ಚಾಲನಾ ಅನುಜ್ಞಾ ಪತ್ರವನ್ನು ಅಮಾನತ್ತು ಮಾಡಬೇಕು. ಅಲ್ಲದೆ, ವಾಹನ ಚಲಾಯಿಸುವ 18 ವರ್ಷ ದೊಳಗಿನ ಮಕ್ಕಳ ಪೋಷಕರ ವಾಹನ ಮಾಲೀಕರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು. ನಗರದ ಕ್ಯಾತ್ಸಂದ್ರ ಜಂಕ್ಷನ್‌ನಲ್ಲಿ ಅಪಘಾತ ಗಳ ಸಂಖ್ಯೆ ಹೆಚ್ಚುತ್ತಿದ್ದು, ಕೂಡಲೇ ಅಪ ಘಾತ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಅವೈಜ್ಞಾನಿಕ ಡಿವೈಡರ್‌ ಸರಿಪಡಿಸಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಮಾತನಾಡಿ, ಜಿಲ್ಲಾದ್ಯಂತ ಸುಮಾರು 88 ಬ್ಲಾಕ್‌ ಸ್ಪಾಟ್‌ಗಳಿದ್ದು, ಎಲ್ಲಾ ಅಧಿಕಾರಿಗಳು ಬ್ಲಾಕ್‌ ಸ್ಪಾಟ್‌ಗಳ ಬಗ್ಗೆ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು. ತುಮ ಕೂರು ನಗರದಲ್ಲಿರುವ ಪಾರ್ಕಿಂಗ್‌ ಏರಿಯಾಗಳನ್ನು ಗುರುತಿಸಿ ವಿವರ ನೀಡ ಬೇಕು. ಭೀಮಸಂದ್ರದ ರೈಲ್ವೆ ಕ್ರಾಸಿಂಗ್‌ ಬಳಿ ನಿರ್ಮಿಸಿರುವ ಸೇತುವೆಯ ಸಮೀಪ ಮಳೆ ಬಂದಾಗ ನೀರು ತುಂಬಿಕೊಂಡು ಸಾರ್ವ ಜನಿಕ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿದೆ. ಇದನ್ನು ಸರಿಪಡಿಸುವಂತೆ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳಿಗೆ ಪತ್ರ ಬರೆಯಬೇಕು. ರಾಷ್ಟ್ರೀಯ ಹೆದ್ದಾರಿ 206ರ ಕಿಬ್ಬನಹಳ್ಳಿ-ಹಿಂಡಸಗೆರೆ, ತಿಪಟೂರು ಮಾರ್ಗದಲ್ಲಿರುವ ಡಿವೈಡರ್‌ ಅವೈಜ್ಞಾನಿಕ ವಾಗಿದ್ದು, ವಾಹನ ಚಾಲನೆಗೆ ತೊಂದರೆ ಯಾಗಿ ಅಪಘಾತಗಳು ಸಂಭವಿಸುತ್ತಿವೆ. ಈ ಡಿವೈಡರನ್ನು ವೈಜ್ಞಾನಿಕವಾಗಿ ಸರಿಪಡಿಸಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್‌ ಪಾಲಿಕೆ ಆಯುಕ್ತ ಭೂಬಾಲನ್‌ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next