ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕುವ ಕಾರ್ಯ ಪ್ರಾರಂಭಿಸಲಾಗಿದೆ ಎಂದು
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕುವ ಪ್ರಯತ್ನ ಕೈಗೊಂಡಿದ್ದೇವೆ. ಈಗಾಗಲೇ ಅಕ್ರಮವಾಗಿ ನೆಲೆಸಿದ್ದ 123 ಆಫ್ರಿಕನ್ ಪ್ರಜೆಗಳನ್ನು ಪತ್ತೆ ಹಚ್ಚಲಾಗಿದ್ದು ಅವರನ್ನು ಹೊರಹಾಕುವ ಪ್ರಯತ್ನ ನಡೆದಿದೆ ಎಂದು ತಿಳಿಸಿದರು.
ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲಿಯೂ ಅಕ್ರಮ ವಲಸಿಗರು ಇರಲು ಬಿಡುವುದಿಲ್ಲ. ಪ್ರವಾಸಿ ವೀಸಾದಡಿ ಬಂದವರನ್ನು ಪತ್ತೆ ಹಚ್ಚಿ ವೀಸಾ ಅವಧಿ ಮುಗಿದ ತಕ್ಷಣ ವಾಪಸ್ ಕಳುಹಿಸಲು ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಹೇಳಿದರು.