Advertisement
ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಹಾಗೂ ಕೇಂದ್ರ ಸಂಸ್ಕೃತಿ ಸಚಿವರಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ “ಹರ್ ಘರ್ ತಿರಂಗಾ” ಕುರಿತ ಇಂದು ಬೆಂಗಳೂರು ನಗರದ ಶಾಂಘ್ರೀಲಾ ಹೊಟೇಲ್‌ನಲ್ಲಿ ನಡೆದ ವಿಡಿಯೋ ಸಂವಾದದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
ಕಾರ್ಯಕ್ರಮದ ಎರಡು ದಿನಗಳ ಮೊದಲೇ ರಾಷ್ಟ್ರಧ್ವಜ ತಲುಪಲಿದೆ ಮಾತ್ರವಲ್ಲದೆ, ರಾಷ್ಟ್ರೀಯತೆ ಹಾಗೂ ದೇಶಭಕ್ತಿಯನ್ನು ಉತ್ತೇಜಿಸುವ ಕಾರ್ಯವನ್ನು ಯೋಗಸಂಘ ಹಾಗೂ ಎಸ್.ಹೆಚ್.ಜಿ ಗುಂಪುಗಳು ಮಾಡುತ್ತಿದ್ದು, ರಾಷ್ಟ್ರೀಯತೆ ಮತ್ತು ದೇಶಭಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪಾತ್ರ ಮೆಚ್ಚುವಂತದ್ದು ಎಂದು ಹೇಳಿದರು.
Advertisement
ರಾಷ್ಟ್ರಧ್ವಜ ಎಂಬುದು ನಮ್ಮ ಭಾವನಾತ್ಮಕ ಸೆಲೆಯಾಗಿರುವುದರಿಂದ “ಹರ್ ಘರ್ ತಿರಂಗಾ” ಕಾರ್ಯಕ್ರಮ ರೂಪಿಸುವ ಮೂಲಕ ದೇಶದಲ್ಲಿ ಏಕತೆಯನ್ನು ಸಾರುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದರು.
ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ಈಗಾಗಲೇ ಸುತ್ತೋಲೆಗಳನ್ನು ನೀಡಲಾಗಿದ್ದು, ಎಲ್ಲಾ ಶಾಲಾ, ಕಾಲೇಜು, ಅಂಗನವಾಡಿಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಮಾತ್ರವಲ್ಲದೆ, ಕರ್ನಾಟಕದಲ್ಲಿರುವ ಎನ್.ಸಿ.ಸಿ., ಎನ್.ಎಸ್.ಎಸ್. ಸ್ವಯಂ ಸೇವಕರು, ಮಾಜಿ ಸೈನಿಕರನ್ನು ಒಳಗೊಂಡಂತೆ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮಾತನಾಡಿ, “ಹರ್ ಘರ್ ತಿರಂಗಾ” ಕಾರ್ಯಕ್ರಮದ ಕುರಿತು ಎಲ್ಲಾ ಹಂತದಲ್ಲೂ ಅಗತ್ಯ ಮತ್ತು ವ್ಯಾಪಕ ಪ್ರಚಾರ ನೀಡುವಂತೆ ತಿಳಿಸಿದರಲ್ಲದೆ, ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ದೇಶಾದ್ಯಂತ 20 ಕೋಟಿ ರಾಷ್ಟ್ರ ಧ್ವಜಗಳನ್ನು ಹಾರಿಸಲು ಕ್ರಮವಹಿಸಬೇಕು ಎಂದರು.
ಕಾರ್ಯಕ್ರಮ ಯಶಸ್ವಿ
ಕೇವಲ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಾತ್ರವಲ್ಲದೆ, ಜನತೆಯ ಸಹಭಾಗಿತ್ವವು ಪ್ರಮುಖವಾಗಿರುವುದರಿಂದ 100 ಕೋಟಿ ಜನತೆಯನ್ನು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಉತ್ತೇಜಿಸಬೇಕು ಎಂದರು.
ಭಾರತ ದೇಶವು ಇದೀಗ ಹಲವಾರು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ದೇಶದಲ್ಲಿ ‘ಹರ್ ಘರ್ ತಿರಂಗಾ” ಕಾರ್ಯಕ್ರಮ ನಡೆಸುತ್ತಿರುವುದೇ ಗೌರವದ ವಿಷಯ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸರ್ಕಾರಿಯ ಎಲ್ಲಾ ಜಾಹೀರಾತುಗಳಲ್ಲಿ ಈ ಕಾರ್ಯಕ್ರಮದ ಕುರಿತು ಪ್ರಕಟಿಸಬೇಕು ಎಂದರಲ್ಲದೆ, ಅಂಚೆ ಕಚೇರಿಗಳಲ್ಲಿ ರಾಷ್ಟ್ರಧ್ವಜಗಳು ಲಭ್ಯವಿರಲಿದ್ದು, ಇಂಡೆಂಟ್ ನೀಡುವ ಮೂಲಕ ಜನರು ವೈಯಕ್ತಿಕವಾಗಿ ಹಾಗೂ ಸರ್ಕಾರದವರು ಖರೀದಿಸಬಹುದಾಗಿದೆ ಎಂದು ಹೇಳಿದರು.
ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನಗಳ ಅವಧಿಯಲ್ಲಿ ಜನತೆಯು ಹಾರಿಸಲಾಗುವ ರಾಷ್ಟ್ರಧ್ವಜದೊಂದಿಗೆ ಸ್ವಂತಿಯೊಂದನ್ನು ಪಡೆದು, ಕೇಂದ್ರ ಸರ್ಕಾರದ ಜಾಲತಾಣದಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ ಎಂದು ತಿಳಿಸಿದರು.
ವಿಡಿಯೋ ಸಂವಾದದದಲ್ಲಿ ಕೇಂದ್ರ ಸಂಸ್ಕೃತಿ ಸಚಿವರಾದ ಕಿಶನ್ ರೆಡ್ಡಿ, ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ. ಪಿ.ಎಸ್.ಹರ್ಷ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.