ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಸಹಯೋಗದಲ್ಲಿ
“ಸರಬರಾಜುದಾರರ ಅಭಿವೃದ್ಧಿ ಮತ್ತು ಹೂಡಿಕೆದಾರರ ಶೃಂಗ ಸಭೆ’ ಪ್ರಯುಕ್ತ ಶನಿವಾರ ಹಮ್ಮಿಕೊಂಡಿದ್ದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ರೋಡ್ ಶೋಗೆ ಚಾಲನೆ ನೀಡಿದ ಮಾತನಾಡಿದ
ಅವರು, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಟೌನ್‌ಶಿಪ್ ನಿರ್ಮಾಣ ತ್ವರಿತವಾಗಿ ಆಗಬೇಕಿದೆ. ಟೌನ್‌ಶಿಪ್ ನಿರ್ಮಾಣ
ಸಂಬಂಧ ಕಡತದ ಅನುಮೋದನೆ ಮೇಲೆ ನಿಗಾ ಇರಿಸಲು ಕಾಸಿಯಾ ವತಿಯಿಂದ ಪ್ರತ್ಯೇಕ ತಂಡ ರಚಿಸಿದರೆ ಒಳಿತು ಎಂದು ಸಲಹೆ ನೀಡಿದರು.
Advertisement
ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಸಣ್ಣ ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿಗಳು, ಸಣ್ಣ ಕೈಗಾರಿಕೆ ಸಚಿವರು ಹಾಗೂ ಕೈಗಾರಿಕಾ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಅದರಂತೆ ಕಳೆದ ನಾಲ್ಕೂವರೆ ವರ್ಷದಲ್ಲಿ 14 ಲಕ್ಷ ಉದ್ಯೋಗ ಸೃಷ್ಟಿಯಾಗಿದ್ದು, ದೇಶಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು. ಕಾಸಿಯಾ ಅಧ್ಯಕ್ಷ ಹನುಮಂತೇಗೌಡ ಇತರರು ಉಪಸ್ಥಿತರಿದ್ದರು.