Advertisement

ಮಹಿಳೆಯರ ಅಪೌಷ್ಟಿಕತೆ ನಿವಾರಣೆಗೆ ಕ್ರಮ 

06:25 AM Nov 16, 2018 | Team Udayavani |

ವಿಜಯಪುರ: ಗರ್ಭಿಣಿಯರು ಹಾಗೂ ಮಹಿಳೆಯರಲ್ಲಿ ಸಮತೋಲನ ಆಹಾರ ಸೇವನೆಗೆ ಸರ್ಕಾರ ಸೂಕ್ತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದಲ್ಲದೆ ಅಪೌಷ್ಟಿಕತೆ ನಿವಾರಣೆಗೆ ಕೇಂದ್ರ, ರಾಜ್ಯ ಸರ್ಕಾರಗಳ ಸಮನ್ವಯದಿಂದ ಕಾರ್ಯ ನಿರ್ವಹಿಸಲಿವೆ ಎಂದು
ಆರೋಗ್ಯ ಸಚಿವ ಶಿವಾನಂದ ಪಾಟೀಲ ಹೇಳಿದರು.

Advertisement

ಗುರುವಾರ ಜಿಲ್ಲೆಯ ಕೂಡಗಿ ಬಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಡಿಲು ಕಿಟ್‌ ವಿತರಣೆ ಕುರಿತು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ.

ರಾಜ್ಯದಲ್ಲಿ ಉತ್ತಮ ವೈದ್ಯಕೀಯ ಸೇವೆ ದೊರೆಯುವಂತಾಗಲು ಈಗಾಗಲೇ 400 ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇನ್ನೂ 1300 ವೈದ್ಯರನ್ನು ನೇಮಿಸಿ ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಇನ್ನಷ್ಟು ಬಲಪಡಿಸಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next