Advertisement
ತಾಲೂಕಿನ ಯಲ್ಲದಕೆರೆ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಈ ಹಿಂದೆ ರಾಜ್ಯ ಮಟ್ಟದಲ್ಲಿ ಮೊರಾರ್ಜಿ ವಸತಿ ಶಾಲೆಯ ಪ್ರವೇಶಕ್ಕೆ ಪರೀಕ್ಷೆ ನಡೆಸಿ ಆಯ್ಕೆಯಾದ ಮಕ್ಕಳಿಗೆ ದೂರದ ಊರುಗಳಲ್ಲಿರುವ ವಸತಿ ಶಾಲೆಗಳಲ್ಲಿ ಪ್ರವೇಶ ನೀಡಲಾಗುತ್ತಿತ್ತು. ಇದರಿಂದ ಮಕ್ಕಳಿಗೆ ಹಾಗೂ ಪೋಷಕರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಸರ್ಕಾರ ವಸತಿ ಶಾಲೆಗಳ ಸೀಟು ಹಂಚಿಕೆಯನ್ನು ಜಿಲ್ಲೆಯ ಒಳಗೆ ನೀಡಲು ಕ್ರಮ ವಹಿಸಿದೆ. ಉತ್ತಮ ಪರಿಸರದಲ್ಲಿ ಯಲ್ಲದಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ನೂತನ ಕಟ್ಟಡ ನಿರ್ಮಿಸಲಾಗಿದೆ ಎಂದರು.
Related Articles
Advertisement
ಯಲ್ಲದಕೆರೆ ಪಂಚಾಯತಿ ವ್ಯಾಪ್ತಿಯಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಅಲೆಮಾರಿ ಕುಟುಂಬಗಳಿಗೆ 400 ಮನೆಗಳನ್ನು ಮಂಜೂರ ಮಾಡಲಾಗಿದೆ. ಪರಿಶಿಷ್ಟ ಜಾತಿ ವರ್ಗದ ಕುಟುಂಬಗಳಿಗೆ 50 ಮನೆಗಳನ್ನು ನೀಡಲಾಗಿದೆ. 1.50 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ಅಭಿವೃದ್ಧಿ ಮಾಡಲಾಗಿದೆ. ಬಹುಗ್ರಾಮ ಯೋಜನೆಯಡಿ ಈ ಭಾಗದ 131 ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಸರ್ಕಾರ 131 ಕೋಟಿ ವೆಚ್ಚದಲ್ಲಿ ಹಿರಿಯೂರು ಹುಳಿಯಾರ ರಸ್ತೆ ಮೇಲ್ದರ್ಜೆಗೆ ಏರಿಸಲಿದೆ. ಶಾಸಕಿಯಾಗಿ ಕ್ಷೇತ್ರದ ನೀರಾವರಿ, ಶಾಲೆ, ಆಸ್ಪತ್ರೆಗಳ ಅಭಿವೃದ್ಧಿ ಒತ್ತು ನೀಡುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಯಲ್ಲದಕೆರೆ ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಚಿಕ್ಕರಂಗಪ್ಪ, ಉಪಾಧ್ಯಕ್ಷ ಜಯಣ್ಣ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳು ಸಂಘದ ಅಧೀಕ್ಷಕ ಅಭಿಯಂತರ ಎಚ್.ಎಲ್. ವೆಂಕಟೇಶ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗೇಂದ್ರ ನಾಯ್ಕ ಟಿ.ಎಚ್., ಹಿರಿಯೂರು ತಹಶೀಲ್ದಾರ ಎನ್. ಶಿವಕುಮಾರ್, ತಾಪಂ ಇಒ ಬಿ.ಎಲ್. ಈಶ್ವರ್ ಪ್ರಸಾದ್, ಕ್ಷೇತ್ರಶಿಕ್ಷಣಾಧಿಕಾರಿ ನಾಗಭೂಷಣ್ ಸೇರಿದಂತೆ ಇತರೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.
ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮವಾಗಿರುವುದು ದುರದೃಷ್ಟಕರ ಸಂಗತಿ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರು ಯಾವುದೇ ರಾಜಕೀಯ ಹಿನ್ನಲೆ ಹೊಂದಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಅಕ್ರಮದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಅನ್ಯಾಯವಾಗುತ್ತದೆ. – ಬಿ.ಸಿ. ಪಾಟೀಲ್, ಕೃಷಿ ಸಚಿವ