Advertisement

ಪಶು ಸಂಗೋಪನೆ ಇಲಾಖೆ 115 ಖಾಲಿ ಹುದ್ದೆ ಭರ್ತಿಗೆ ಕ್ರಮ: ಚವ್ಹಾಣ

08:33 AM Jun 27, 2020 | Suhan S |

ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯಲ್ಲಿ 371 (ಜೆ)ಯಡಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದು ಪಶು ಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ. ಚವ್ಹಾಣ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡದೆ ನಿರ್ಲಕ್ಷಿಸಿತ್ತು. ಈಗ ಬ್ಯಾಕ್‌ಲಾಗ್‌ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗಿದ್ದು, ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. 32 ಪಶು ವೈದ್ಯ ಪರೀಕ್ಷಕರ ಹುದ್ದೆ ಹಾಗೂ 83 ಪಶು ವೈದ್ಯಕೀಯ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಇನ್ನೂ ಹೆಚ್ಚಿನ ಒತ್ತು ನೀಡಲಾಗುವುದು. ಅಲ್ಲದೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next