Advertisement

ಕಸಾಪಕ್ಕೆ ವಾಹನ ನೀಡಲು ಕ್ರಮ: ಮುರುಗೇಶ ನಿರಾಣಿ

01:10 PM Jan 28, 2022 | Team Udayavani |

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್‌ನ ಕೆಲಸ ಕಾರ್ಯಗಳಿಗಾಗಿ ಸರ್ಕಾರ ಮತ್ತು ಪರಿಷತ್‌ ನಡುವೆ ಸಂಪರ್ಕ ಸೇತುವೆ ರೀತಿಯಲ್ಲಿ ಕೆಲಸ ಮಾಡಲಾಗುವುದು ಮತ್ತು ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರಿಷತ್‌ಗೆ ವಾಹನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

Advertisement

ನಗರದ ಕನ್ನಡ ಭವನ ಆವರಣದಲ್ಲಿ ಸಾರ್ವಜನಿಕ ಗ್ರಂಥಾಲಯ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್‌ ಹೆಚ್ಚಿನ ಜನರನ್ನು ಆಕರ್ಷಿಸುವಲ್ಲಿ ಮತ್ತು ಜ್ಞಾನರ್ಜನೆಗೆ ಗ್ರಂಥಾಲಯ ಸಹಕಾರವಾಗಲಿದೆ. ಪರಿಷತ್‌ಗೆ ಕೆಕೆಆರ್‌ಡಿಬಿ ಅನುದಾನ ಅಥವಾ ಸರ್ಕಾರದಿಂದ ವಾಹನ ಒದಗಿಸುವ ವ್ಯವಸ್ಥೆ ಮಾಡಲಾಗುವುದು. ಜತೆಗೆ ದರ್ಶನಾಪುರ ರಂಗಮಂದಿರಕ್ಕೆ ಧ್ವನಿ ವರ್ಧಕದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಕೆಕೆಆರ್‌ಡಿಬಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಈಗಾಗಲೇ ಪರಿಷತ್‌ ಚಟುವಟಿಕೆಗಳು ಮತ್ತು ಕನ್ನಡ ಭವನ ಆವರಣದಲ್ಲಿ ಅಭಿವೃದ್ಧಿಗೆ ಕೆಲಸಗಳಿಗೆ ಸಹಕಾರ ನೀಡಲಾಗುತ್ತಿದೆ. ಮುಂದೆಯೂ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಗ್ರಾಮೀಣ ಪ್ರದೇಶದಲ್ಲಿ ಪರಿಷತ್‌ ಚಟುವಟಿಕೆ ಕೈಗೊಳ್ಳಲು ಮತ್ತು ವಿಸ್ತರಿಸಿಲು ವಾಹನದ ಅವಶ್ಯಕತೆಯಿದೆ. ದರ್ಶನಾಪುರ ರಂಗಮಂದಿರದಲ್ಲಿ ಶಾಶ್ವತವಾದ ಧ್ವನಿ ವರ್ಧಕ ಅಳವಡಿಸಬೇಕಿದೆ ಎಂದು ಕೋರಿದರು.

ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯರಾದ ಶಶೀಲ ನಮೋಶಿ, ಬಿ.ಜಿ.ಪಾಟೀಲ, ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಡಾ| ಶರಣರಾಜ ಛಪ್ಪರಬಂದಿ, ಸರ್ಕಾರಿ ನೌಕಕರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಜಯಕುಮಾರ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next