Advertisement

ಕೇಂದ್ರಕ್ಕೆ ಇಎಸ್‌ಐ ಆಸ್ಪತ್ರೆ ಹಸ್ತಾಂತರಿಸಲು ಕ್ರಮ

12:43 PM Apr 29, 2017 | Team Udayavani |

ಹುಬ್ಬಳ್ಳಿ: ಇಎಸ್‌ಐ ಆಸ್ಪತ್ರೆಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವ ಕುರಿತು ಸಚಿವರೊಂದಿಗೆ ಚರ್ಚಿಸಿ ಇನ್ನೊಂದು ವಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ಅವರು ನಗರದ ಇಎಸ್‌ಐ ಸುಸಜ್ಜಿತ 50 ಹಾಸಿಗೆಗಳ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. 

Advertisement

ಇಎಸ್‌ಐ ಆಸ್ಪತ್ರೆ ನಿರ್ವಹಣೆಯನ್ನು ರಾಜ್ಯ ಸರ್ಕಾರ ಮಾಡಬೇಕೋ ಅಥವಾ ಕೇಂದ್ರ ಸರ್ಕಾರ ವಹಿಸಿಕೊಳ್ಳಬೇಕೋ ಎಂಬ ಬಗ್ಗೆ ಗೊಂದಲವಿದೆ. ಕಾರ್ಮಿಕ ಸಚಿವ ಹಾಗೂ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಎಸ್‌ಐ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯಾಗಿಸಲು ನಿರ್ಧರಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು. 

100 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಿ: ಹೆಚ್ಚುತ್ತಿರುವ ಕಾರ್ಮಿಕರ ಸಂಖ್ಯೆಯನ್ನು ಪರಿಗಣಿಸಿ ಇಎಸ್‌ಐ ಆಸ್ಪತ್ರೆಯನ್ನು 100 ಬೆಡ್‌ ಆಸ್ಪತ್ರೆಯನ್ನಾಗಿ ನಿರ್ಮಿಸಬೇಕು. ಇದಕ್ಕಾಗಿ 50 ಕೋಟಿ ರೂ. ಅನುದಾನ ನೀಡಬೇಕು. 7 ವರ್ಷಗಳ ಹಿಂದೆ ಅಂದಿನ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆ ಸುಸಜ್ಜಿತಗೊಳಿಸಲು 25 ಕೋಟಿ ರೂ. ಅನುದಾನ ನೀಡಿದ್ದರು.

ಆಸ್ಪತ್ರೆಯಲ್ಲಿ ಸಮರ್ಪಕವಾಗಿ ಔಷಧಗಳು ಸಿಗುವಂತಾಗಬೇಕು ಅಲ್ಲದೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಕಾರ್ಮಿಕರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಲಭ್ಯವಾಗಬೇಕು. ಇಎಸ್‌ಐ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರ ಶೇ.93ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿದ್ದು, ಶೇ.7ರಷ್ಟು ರಾಜ್ಯ ಸರ್ಕಾರ ಅನುದಾನ ನೀಡುತ್ತಿದೆ ಎಂದರು. 

ಹುಬ್ಬಳ್ಳಿಯಲ್ಲಿ ಇಎಸ್‌ಐ ಉಪವಲಯ ಕಚೇರಿಯಿದ್ದು, ವಲಯ ಕಚೇರಿಗಾಗಿ 400 ಕಿ.ಮೀ. ದೂರದ ಗುಲ್ಬರ್ಗಕ್ಕೆ ಹೋಗಬೇಕಿದೆ. ಆದ್ದರಿಂದ ಹುಬ್ಬಳ್ಳಿಯಲ್ಲಿ ವಲಯ ಕಚೇರಿ ಆರಂಭಿಸಿದರೆ ಈ ಭಾಗದ ಕಾರ್ಮಿಕರಿಗೆ ಅನುಕೂಲವಾಗುತ್ತದೆ ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು. 

Advertisement

ಕೇಂದ್ರಕ್ಕೆ ಹಸ್ತಾಂತರವಾಗಲಿ: ಇಎಸ್‌ಐ ಆಸ್ಪತ್ರೆಗಳನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದರೆ ನಿರ್ವಹಣೆಗೆ ಹಾಗೂ ಇನ್ನಷ್ಟು ವೈದ್ಯಕೀಯ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ. ರಾಜ್ಯ ಸರ್ಕಾರ ಹಸ್ತಾಂತರಕ್ಕೆ ಸಿದ್ಧವಿದ್ದು, ಈ ದಿಸೆಯಲ್ಲಿ ಕ್ರಮ ಕೈಗೊಳ್ಳಬೇಕು.

ಸಂಘಟಿತ ಕಾರ್ಮಿಕರಿಗೆ ಸೌಲಭ್ಯಗಳು ಸಿಗುತ್ತಿವೆ. ಆದರೆ ಅಸಂಘಟಿತ ಕಾರ್ಮಿಕರಿಗೂ ಸೌಲಭ್ಯಗಳು ಸಿಗುವಂತಾಗಬೇಕು. ಅಸಂಘಟಿತ ಕಾರ್ಮಿಕರ ನೋಂದಣಿಯಾದರೆ ಅವರ ಒಳಿತಿಗಾಗಿ ಸರ್ಕಾರದಲ್ಲಿರುವ ಸಹಸ್ರಾರು ಕೋಟಿ ರೂ. ಹಣ ಸದ್ಬಳಕೆ ಮಾಡಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ, ಮಹಾಪೌರ ಡಿ.ಕೆ.ಚವ್ಹಾಣ, ಉಪಮಹಾಪೌರ ಲಕ್ಷ್ಮಿ ಬಿಜವಾಡ, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಶಾಸಕ ಪ್ರಸಾದ ಅಬ್ಬಯ್ಯ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಮೊದಲಾದವರಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next