Advertisement
ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.
Related Articles
Advertisement
ಇದನ್ನೂ ಓದಿ: ಅಂಜನಾದ್ರಿಯಲ್ಲಿ ಇತಿಹಾಸ ತಿರುಚಿದ ನಾಮಫಲಕ ಸರಿಪಡಿಸದ ಹಂಪಿ ಅಭಿವೃದ್ಧಿ ಪ್ರಾಧಿಕಾರ !
ಎಲ್ಲ ದೇವಸ್ಥಾನಗಳಿಗೆ ತಸ್ತಿಕ ಹಣ 19.ಕೋಟಿ ರೂ. ಬಾಕಿ ಇದ್ದು ಶೀಘ್ರವೇ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಇನ್ನು ಮುಜರಾಯಿಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳಆಸ್ತಿ ಮಾರ್ಗನಕ್ಷೆ, ಅಲ್ಲಿನಸೇವೆಗಳಸಂಪೂರ್ಣಮಾಹಿತಿಯನ್ನು ಆನ್‌ಲೈನ್‌ಮೂಲಕತಿಳಿದುಕೊಳ್ಳುವಂತೆಐಟಿಎಂಎಸ್ (ಇಂಟಿಗ್ರೆಟೆಡ್ ಡೆವೆಲಪ್ ಮೆಂಟ್ ಮ್ಯಾನೇಜ್ ಮೆಂಟ್ ಸಿಸ್ಟಮ್) ಜಾರಿಗೆ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು. ಇದೊಂದು ವಿನೂತನ ಯೋಜನೆಯಾಗಿದ್ದು, ರಾಜ್ಯದಲ್ಲಿ ಇದನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಿಗೂ ಇದು ಪೂರಕವಾಗಲಿದೆ ಎಂದು ವಿವರಿಸಿದರು.
ವಿಜಯದಶಮಿ ದಿನ ರಾಜ್ಯದ ಎಲ್ಲ ಜನತೆಯ ಆರೋಗ್ಯಕ್ಕಾಗಿ ವಿಶೇಷ ಪೂಜೆ:
ವಿಶ್ವದಲ್ಲಿ ಕೊರೊನಾ ಎರಡು ಅಲೆಗಳಿಂದ ಸಾಕಷ್ಟು ಜನರ ಜೀವ ಹಾನಿಯಾಗಿದೆ. ಈಗ ಮೂರನೆ ಅಲೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಾಯ ಪಟ್ಟಿದ್ದಾರೆ.
ನಾವು ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ದೇವಸ್ಥಾನಗಳಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15 ರಂದು ಎಲ್ಲ ಜನರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.
ಹಿಂದು ಧರ್ಮ ಶಾಸ್ತ್ರ ಪುರಾಣದಲ್ಲಿ ವಿಜಯದಶಮಿಯನ್ನು ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಇದು ದುಷ್ಟ ಶಕ್ತಿಯನ್ನು ಸಂಹರಿಸಿ ವಿಜಯವನ್ನು ಆಚರಿಸುವ ದಿನ. ಆದ್ದರಿಂದ ಈ ದಿನ ಶ್ರೀ ಭಗವತಿ ಮತ್ತು ಭಗವಂತನನ್ನು ವಿಶೇಷವಾಗಿ ಪ್ರಾರ್ಥಿಸಿ ಪೂಜಿಸಿದರೆ. ವಿಶೇಷ ಫಲ ಹೊಂದ ಬಹುದೆಂದು ಶಾಸ್ತ್ರ ವಿಧಿತವಾಗಿದೆ. ಅಲ್ಲದೇ ಭಕ್ತರ ನಂಬಿಕೆಯೂ ಆಗಿರುವುದರಿಂದ ಪ್ರಾಕೃತಿಕವಾಗಿ ಯಾರಿಗೂ ದಷ್ಪರಿಣಾಮ ಆಗದಂತೆ ವಿಜಯ ದಶಮಿಯ ದಿನ ಅಕ್ಟೋಬರ 15 ರಂದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕೊರೊನಾ ಸಂಕಟ ದೂರ ಮಾಡಿ ಜನತೆಯ ಆರೋಗ್ಯ ಕಾಯುವಂತೆ ವಿಶೇಷ ಪೂಜೆ ನೆರವೇರಿಸಲು ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇದೇ ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಪ್ರವೇಶಕ್ಕೆ ಡ್ರೆಸ್ ಕೋಡ್ ಮಾಡುವ ಬಗ್ಗೆ ನನ್ನ ಮುಂದೆ ಯಾವುದೆ ಪ್ರಸ್ತಾಪ ಬಂದಿಲ್ಲ. ಧಾರ್ಮಿಕ ಪರಿಷತ್ ನಲ್ಲಿ ಚರ್ಚೆಯಾಗಿದ್ದರೆ ಮಾಹಿತಿ ಪಡೆದು ಪರಿಶೀಲನೆ ಮಾಡಲಾಗುವುದು.
ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಮುಜಾವರ ಅವರನ್ನು ನೇಮಕ ಮಾಡಿದ್ದನ್ನು ರದ್ದು ಪಡಿಸಿರುವ ಹೈಕೋರ್ಟ್ ಆದೇಶದ ಬಗ್ಗೆ ಸಂಪುಟ ಉಪ ಸಮಿತಿಯಲ್ಲಿ ಚರ್ಚೆಯಾಗಿದೆ ಎಂದು ಸಚಿವರಿಗೆ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಹಾಗೂ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ, ಮುಜರಾಯಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.