Advertisement

ಮಕ್ಕಳ ಹಾಜರಾತಿ ಹೆಚ್ಚಳಕ್ಕೆ ಕ್ರಮ

06:24 AM Jun 27, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಅಂಗನವಾಡಿಗಳ ಗುಣಮಟ್ಟ ಮೇಲ್ದರ್ಜೆಗೇರಿಸಿ, ಮಕ್ಕಳ ಹಾಜರಾತಿ ಹೆಚ್ಚು ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ನವೀಣ್ಯ ಪೂರ್ಣವಾದ ಚಟುವಟಿಕೆಗಳನ್ನು ಆರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಅ.ಜೊಲ್ಲೆ ತಿಳಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ  ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿ, ಇಲಾಖೆಯ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಮೂಲಕ ಯೋಜನೆಗಳ ಲಾಭವನ್ನು ಅರ್ಹ ಫ‌ಲಾನುಭವಿಗಳಿಗೆ  ತಲುಪಿಸಬೇಕೆಂದರು.

ಲೋಪವಾದರೆ ಕ್ರಮ: ಜಿಲ್ಲೆಯಲ್ಲಿ 1961 ಅಂಗನವಾಡಿಗಳಿಗೆ 4 ಎಂಎಸ್‌ಪಿಸಿಗಳ ಮುಖಾಂತರ ಉತ್ತಮ ಪೌಷ್ಟಿಕ ಆಹಾರ ತಲುಪಿಸಲಾಗುತ್ತಿದ್ದು, ಆಹಾರ ಪೂರೈಕೆಯಲ್ಲಿ ಲೋಪದೋಷಗಳು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು  ಎಂದು ಎಚ್ಚರಿಸಿದರು. ಪೋಷನ್‌ ಅಭಿಯಾನ, ಮಾತೃ ಪೂರ್ಣ ಯೋಜನೆ ಸೇರಿದಂತೆ ಮಾತೃ ವಂದನಾ ಯೋಜನೆಗಳ ಮೂಲಕ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ತಲುಪಿಸಬೇಕು  ಎಂದರು.

ಆನ್‌ಲೈನ್‌ ಮಾರುಕಟ್ಟೆ: ಸ್ವಾಧಾರ್‌ ಗೃಹ ಯೋಜನೆಯಡಿ ಮಹಿಳೆಯರಿಗೆ ನೀಡಲಾ ಗುತ್ತಿರುವ ತರಬೇತಿಗಳನ್ನು ಪ್ರಚಲಿತ, ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಯೋಜ ನೆಗಳ ಬಗ್ಗೆ ತರಬೇತಿ ನೀಡಲು ಕ್ರಮ ವಹಿಸ ಬೇಕು.  ಮುಂದಿನ ಹಂತದಲ್ಲಿ ಆನ್‌ಲೈನ್‌ ಮಾರುಕಟ್ಟೆ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುರೇಖಾ, ಜಿಲ್ಲಾಧಿಕಾರಿ ಆರ್‌.ಲತಾ, ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದಿಟಛಿ ಇಲಾ ಖೆಯ  ಉಪನಿರ್ದೇಶಕ ನಾರಾಯಣ ಸ್ವಾಮಿ, ಉಪವಿಭಾಗಾಧಿಕಾರಿ ರಘುನಂದನ್‌ ,ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್‌ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next