Advertisement
ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಮೊದಲ ಡೋಸ್ ಹಾಗೂ ಎರಡನೇ ಡೋಸ್ 27 ಲಕ್ಷ ಜನ ಪಡೆದಿದ್ದಾರೆ. ಮೂರನೇ ಡೋಸ್ ಅನ್ನು 6 ಲಕ್ಷ ಜನ ಪಡೆದಿದ್ದಾರೆ. ಯಾರೂ ಭಯ ಬೀಳದೇ ಮುನ್ನೆಚ್ಚರಿಕೆ ವಹಿಸ ಬೇಕು. ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಜನರು ಮಾಸ್ಕ್ ಹಾಕಲು ಮನವಿ ಮಾಡಿದ್ದೇವೆ. ಸದ್ಯಕ್ಕೆ ಯಾವುದಕ್ಕೂ ನಿರ್ಬಂಧ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
Related Articles
Advertisement
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿನ ಕೋವಿಡ್ ಪರಿಸಿœತಿಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಕ್ರಮಗಳ ಕುರಿತು ಅವರು ಮಾತನಾಡಿದರು. ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಿಸುವುದು, ಎಲ್ಲ ತೀವ್ರ ನೆಗಡಿ, ಕೆಮ್ಮು, ಜ್ವರ ಪ್ರಕರಣಗಳನ್ನು ಪರೀಕ್ಷೆ ಮಾಡುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ವಿಮಾನ ನಿಲ್ದಾಣಗಳಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕ ರಲ್ಲಿ ಶೇ.2ರಷ್ಟು ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವುದು, ತಾಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಕೆಲ ಹಾಸಿಗೆಗಳನ್ನು ಮೀಸಲಿಡಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಪಬ್, ಬಾರ್, ರೆಸ್ಟೋರಂಟ್, ಚಲನಚಿತ್ರ ಮಂದಿರಗಳು, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ವಿಮಾನ ಪ್ರಯಾಣ ಸಂದರ್ಭಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅರ್ಹರೆಲ್ಲರೂ ಕೋವಿಡ್ -19 ಲಸಿಕೆಯ ಮುನ್ನೆಚ್ಚರಿಕಾ ಡೋಸ್ ಗಳನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಹೆಚ್ಚಿನ ಜನರು ಗುಂಪು ಗೂಡುವಿಕೆ ಯನ್ನು ತಡೆಯಬೇಕು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚಿಸಿದರು.