Advertisement
ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಅನ್ವಯ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಸಭೆಗಳಲ್ಲಿ ಚರ್ಚಿಸಿದಂತೆ ಬೆ„ಲಹೊಂಗಲ, ಅಥಣಿ ಹಾಗೂ ಇತರ ತಾಲೂಕುಗಳಲ್ಲಿ ಸ್ಮಶಾನಕ್ಕೆ ಜಾಗ ನೀಡುವ ಕುರಿತು ಮಾತನಾಡಿದ ಜಿಲ್ಲಾ ಧಿಕಾರಿಗಳು, ತಾಲೂಕು ಮಟ್ಟದ ಅಧಿ ಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕದಲ್ಲಿದ್ದು, ಪರಿಶೀಲಿಸಲಾಗುತ್ತಿದೆ. ಸ್ಮಶಾನಕ್ಕೆ ಜಾಗ ನೀಡಲು ಖಾಸಗಿ ಭೂ ಮಾಲೀಕರಿಗೂ ಅವಕಾಶ ನೀಡಲಾಗುವುದು. ಖಾಸಗಿ ಭೂ ಮಾಲೀಕರು ಸ್ವಇಚ್ಛೆಯಿಂದ ಜಾಗ ನೀಡಲು ಮುಂದಾಗಬೇಕು ಎಂದು ತಿಳಿಸಿದರು.
Related Articles
Advertisement
ದೌರ್ಜನ್ಯ ಪ್ರಕರಣಗಳನ್ನು ನಿರ್ವಹಿಸುವಂತಹ ಡಿ.ಎಸ್.ಪಿ ಮಟ್ಟದ ಅ ಧಿಕಾರಿಗಳು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದರೆ ಮಾತ್ರ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಸಾಧ್ಯವಾಗಲಿದೆ. ದೌರ್ಜನ್ಯ (ಅಟ್ರಾಸಿಟಿ) ಪ್ರಕರಣಗಳನ್ನು ನಿರ್ವಹಿಸುವ ಡಿ.ಎಸ್.ಪಿ.ಗಳನ್ನು ಸಭೆಗೆ ಕರೆಸಬೇಕು. ಇದರಿಂದ ಇಂತಹ ಪ್ರಕರಣಗಳ ಸಮರ್ಪಕ ತನಿಖೆ ಹಾಗೂ ದೋಷಾರೋಪಣೆ ಪಟ್ಟಿ ಸಲ್ಲಿಸಲು ಸಾಧ್ಯವಾಗಲಿದೆ ಎಂದು ಹೇಳಿದರು. ನೂರಾರು ಕುಟುಂಬಗಳು ಮನೆಗಳನ್ನು ಕಳೆದುಕೊಂಡಿದ್ದರೂ ಉತಾರ ಇಲ್ಲದಿರುವ ಕಾರಣಕ್ಕೆ ಪರಿಹಾರ ಮತ್ತಿತರ ಸೌಲಭ್ಯ ಸಿಗುತ್ತಿಲ್ಲ. ಹೀಗಾಗಿ ಅಂತಹ ಕುಟುಂಬಗಳಿಗೆ ಉತಾರ ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಸುರೇಶ ತಳವಾರ ಅವರು, ಹುಕ್ಕೇರಿ ತಾಲೂಕು ಇಂಗಳಿ ಗ್ರಾಮದ ಸ್ಮಶಾನ ಭೂಮಿ ಉತಾರ ಇನ್ನೂ ನೀಡುತ್ತಿಲ್ಲ. ಇನ್ನೂ 36 ಗ್ರಾಮಗಳಿಗೆ ಸ್ಮಶಾನ ಭೂಮಿ ಮಂಜೂರಾತಿಗೆ ಪ್ರಸ್ತಾವ ಸಲ್ಲಿಸಲಾಗಿದ್ದು, ಭೂಮಿ ಮಂಜೂರಾತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿ ಸಿದ ತಹಶೀಲ್ದಾರರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು. ಸಾರ್ವಜನಿಕರಿಗೆ ಮುಕ್ತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದ್ದರೂ ಕೆಲ ರಾಜಕೀಯ ವ್ಯಕ್ತಿಗಳು ತಮಗೆ ಬೇಕಾದವರಿಗೆ ಮಾತ್ರ ಟೋಕನ್ ನೀಡುವ ಮೂಲಕ ಲಸಿಕಾಕರಣವನ್ನೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಧಿಕಾರಿಗಳಿಗೆ ಒತ್ತಾಯಿಸಿದರು.
ಜಿಪಂ ಸಿಇಒ ದರ್ಶನ್ ಎಚ್.ವಿ., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.