Advertisement

Udupi ಹಕ್ಕುಪತ್ರ ವಿತರಿಸಲು ಕ್ರಮ: ಜಿಲ್ಲಾಧಿಕಾರಿ

11:05 PM Aug 07, 2024 | Team Udayavani |

ಉಡುಪಿ: ಜಿಲ್ಲೆಯ ನಿವೇಶನ ರಹಿತ ಅರ್ಹ ಫ‌ಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿ.ಪಂ.ನ ಡಾ| ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಜರಗಿದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾ.ಪಂ.ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫ‌ಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ, ಈಗಾಗಲೇ ಲಭ್ಯವಿರುವ ನಿವೇಶನಗಳ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿಧ ಗ್ರಾ.ಪಂ.ಗಳಲ್ಲಿ ನಿವೇಶನ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ.

ಬೇಡಿಕೆಯಿರುವ ಗ್ರಾಮಗಳಲ್ಲಿ ನಿವೇಶನ ವಿತರಿಸಲು ಅಗತ್ಯ ವಿರುವ ಜಮೀನು ಗುರುತಿಸುವ ಕಾರ್ಯ ವನ್ನು ತಹಶೀಲ್ದಾರರು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ಸಮನ್ವಯ ದೊಂದಿಗೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ಭೂಮಿ ನೀಡಲು ಕಾದಿರಿಸುವ ಜಮೀನಿನ ಸರ್ವೇ ಕಾರ್ಯಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಅವುಗಳನ್ನು ನಿವೇಶನವಾಗಿ ಪರಿವರ್ತಿಸುವ ಕಾರ್ಯಗಳನ್ನು ಅಧಿಕಾರಿಗಳು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು. ನಿವೇಶನ ಬೇಡಿಕೆಯಿರುವ ಗ್ರಾ.ಪಂ.ವ್ಯಾಪ್ತಿಯಲ್ಲಿ ಭೂಮಿ ಲಭ್ಯವಿಲ್ಲದಿದ್ದಲ್ಲಿ ಸಮೀಪದ ಗ್ರಾ.ಪಂ.ವ್ಯಾಪ್ತಿಯಲ್ಲಿರುವ ಭೂಮಿಯನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಕಾದಿರಿಸಬೇಕು ಎಂದರು.

Advertisement

ಕೆಲವು ಗ್ರಾ.ಪಂ.ವ್ಯಾಪ್ತಿಯಲ್ಲಿ ನಿವೇಶನ ರಹಿತ ಫ‌ಲಾನುಭವಿಗಳನ್ನು ಗುರುತಿಸದಿದ್ದಲ್ಲಿ, ಅಂತಹ ಗ್ರಾ.ಪಂ. ಒಂದು ತಿಂಗಳ ಒಳಗೆ ಅರ್ಹ ಫ‌ಲಾನುಭವಿಗಳನ್ನು ನಿಯಮಾನುಸಾರ ಆಯ್ಕೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್‌ ಬಾಯಲ್‌, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್‌., ಯೋಜನಾ ನಿರ್ದೇಶಕ ಪ್ರಶಾಂತ್‌ ರಾವ್‌, ಎಲ್ಲ ತಾಲೂಕಿನ ತಹಶೀಲ್ದಾರ್‌ಗಳು,ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next