Advertisement

ಪ್ರವಾಹ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ

05:56 PM Jun 17, 2021 | Team Udayavani |

ಬೈಲಹೊಂಗಲ: ಈ ವರ್ಷ ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಪ್ರವಾಹ ಬಂದು ಹಾನಿಗೀಡಾಗ ಬಹುದಾದ ಪ್ರದೇಶದ ಜನರನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಹಾಗೂ ಪ್ರಾಣ ಹಾನಿ, ಜಾನುವಾರು ಹಾನಿಯಾಗದಂತೆ ಸಂರಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ತಹಶೀಲ್ದಾರ್‌ ಹಾಗೂ ಕಾರ್ಯನಿರ್ವಾಹಕ ಅಧಿ ಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು.

Advertisement

ಬೈಲಹೊಂಗಲ ಉಪವಿಭಾಗದಲ್ಲಿ ಬರುವ ಒಟ್ಟು ಆರು ತಾಲೂಕಿಗೆ ಸಂಬಂ ಧಿಸಿದಂತೆ ಪ್ರವಾಹ, ಅತಿವೃಷ್ಟಿ ಪೂರ್ವಸಿದ್ಧತೆ ಕೈಗೊಳ್ಳುವ ಸಲುವಾಗಿ ಉಪವಿಭಾಗದ ತಾಲೂಕು ಮಟ್ಟದ ಅ ಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಳೆ ಹಾನಿ, ಮನೆಗಳ ಹಾನಿ ಉಂಟಾದಲ್ಲಿ ಕೂಡಲೇ ತಂಡಗಳನ್ನು ರಚಿಸಿ ವರದಿ ನೀಡಲು ಸಂಬಂಧಪಟ್ಟ ತಾಲೂಕು ಮಟ್ಟದ ಅ ಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳಬೇಕು. ವಿದ್ಯುತ್‌ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳಿಂದ ಹಾನಿಯಾಗುವ ಸಂಭವವಿರುವ ಬಗ್ಗೆ ಪರಿಶೀಲಸಲು ಸಂಬಂಧಪಟ್ಟ ಹೆಸ್ಕಾಂ ಅಧಿ ಕಾರಿಗಳಿಗೆ ಸೂಚನೆ ನೀಡಲಾಯಿತು.

ಗ್ರಾಮೀಣ, ನಗರ ಪ್ರದೇಶಗಳಲ್ಲಿ ಚರಂಡಿಗಳನ್ನು ಸ್ವತ್ಛಗೊಳಿಸಿ ನೀರು ಸರಾಗವಾಗಿ ಹರಿದುಹೋಗಲು ತಾ.ಪಂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಅಧಿ ಕಾರಿಗಳಿಗೆ ಸೂಚಿಸಿದರು. ಸಾಂಕ್ರಾಮಿಕ ರೋಗಗಳಿಗೆ ಸಂಬಂಧಿ ಸಿದಂತೆ ಅವಶ್ಯವಿರುವ ಔಷಧಗಳನ್ನು ಸಂಗ್ರಹಿಸಿಡಲು ತಾಲೂಕು ಆರೋಗ್ಯಾ ಧಿಕಾರಿಗಳಿಗೆ ಸೂಚಿಸಲಾಯಿತು. ಜಾನುವಾರುಗಳಿಗೆ ಯಾವುದೇ ರೋಗ ರುಜಿನ ಬಂದಲ್ಲಿ ಶೀಘ್ರ ಚಿಕಿತ್ಸೆ ಒದಗಿಸಲು ಅವಶ್ಯವಿರುವ ಔಷಧ , ಲಸಿಕೆಗಳನ್ನು ಸಂಗ್ರಹಿಸಿಡಲು ಪಶು ವೈದ್ಯಾ ಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್‌ಗಳಾದ ಬಸವರಾಜ ನಾಗರಾಳ, ಸೋಮಲಿಂಗಪ್ಪ ಹಲಗಿ, ಪ್ರಕಾಶ ಹೊಳೆಪ್ಪಗೋಳ, ಮಲ್ಲಿಕಾರ್ಜುನ ಹೆಗ್ಗನ್ನವರ, ತಾ.ಪಂ ಇಒ ಸುಭಾಶ ಸಂಪಗಾವಿ, ತಾಲೂಕು ಮಟ್ಟದ ಅ ಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next