ಹಾಸನ/ರಾಮನಾಥಪುರ: ಅರಕಲಗೂಡು ತಾಲೂಕು ರಾಮನಾಥಪುರ ಪಟ್ಟಣಕ್ಕೆ ಕಾವೇರಿ ನದಿಯ ಪ್ರವಾಹದ ನೀರು ನುಗ್ಗದಂತೆ ನದಿ ದಂಡೆಗೆ ತಡೆಗೋಡೆ ನಿರ್ಮಾಣ ಆರಂಭವಾಗಿದೆ.
ಕಾವೇರಿ ನದಿ ದಂಡೆಯ ರಾಮೇಶ್ವರಸ್ವಾಮಿ ದೇವಾಲಯದ ಹತ್ತಿರ 70 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಕಳೆದ ಮೂರು ವರ್ಷದಿಂದ ಮಳೆಗಾಲದಲ್ಲಿ ಪ್ರವಾಹದ ನೀರು ಮನೆಗಳಿಗೆ ನುಗ್ಗುತ್ತಿತ್ತು. ಹಾಗಾಗಿ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಕೆಲವು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗದೆ ತೊಂದರೆಯಾಗುತ್ತಿದ್ದರೂ ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ಬಿಡುಗಡೆ ಮಾಡಿಸಿ ತಡೆಗೋಡೆ ನಿರ್ಮಾಣ ಆರಂಭಿಸಲಾಗಿದೆ.ಇನ್ನೂ ಹೆಚ್ಚು ಅನುದಾನ ಬಿಡುಗಡೆಗೆ ಪ್ರಯತ್ನ ಮುಂದುವರಿಸಿರುವುದಾಗ ಶಾಸಕರು ಸ್ಪಷ್ಟಪಡಿಸಿದರು.
ಇದನ್ನೂ ಓದಿ :ರಾಮ ಮಂದಿರಕ್ಕೆ ದೇಣಿಗೆ ಮಹಾಪೂರ
ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿ ಮಾನವೀಯ ಮೌಲ್ಯಗಳನ್ನು ಬಿತ್ತ ಬೇಕಿರುವ ಈ ಸಂದರ್ಭದಲ್ಲಿ ಅರಸೀಕಟ್ಟೆ ಕ್ಷೇತ್ರಕ್ಕೆ ಬರುವ ಭಕ್ತರಿಗಾಗಿ ಮತ್ತು ಕ್ಷೇತ್ರದ ಆಕರ್ಷಣೆ ಹೆಚ್ಚಿಸುವ ದೃಷ್ಟಿಯಿಂದ ಅನೇಕ ಸೌಲಭ್ಯಗಳಿಗೆ ಚಾಲನೆ ನೀಡಲಾಗುತ್ತಿದೆ. ಶ್ರೀಅರಸೀಕಟ್ಟೆ ಅಮ್ಮನ ದೇವಸ್ಥಾನ ಆವರಣದಲ್ಲಿ ಭಕ್ತರ ಅನುಕೂಲಕ್ಕಾಗಿ 3.6 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ವಿವರಿಸಿದರು.