Advertisement

ಮಾನವ-ಪ್ರಾಣಿ ಸಂಘರ್ಷ ತಡೆಗೆ ಕ್ರಮ: ಆನಂದ್‌ಸಿಂಗ್‌

11:24 PM Mar 10, 2020 | Lakshmi GovindaRaj |

ವಿಧಾನಸಭೆ: ಕಾಡಾನೆ ದಾಳಿ ಸೇರಿ ಪ್ರಾಣಿ ಮತ್ತು ಮಾನವ ಸಂಘರ್ಷ ಪ್ರಕರಣಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎಂದು ಅರಣ್ಯ ಸಚಿವ ಆನಂದ್‌ಸಿಂಗ್‌ ತಿಳಿಸಿದ್ದಾರೆ. ಶೂನ್ಯ ವೇಳೆಯಲ್ಲಿ ಜೆಡಿಎಸ್‌ನ ಎಚ್‌.ಕೆ.ಕುಮಾರಸ್ವಾಮಿ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಕಾಡಿನಲ್ಲಿ ಆಹಾರ ಸಿಗದ ಕಾರಣ ಆನೆಗಳು ನಾಡಿಗೆ ಬರುವಂತಾಗಿದೆ.

Advertisement

ಕಾಡಿನಲ್ಲೇ ಅವುಗಳಿಗೆ ಆಹಾರ ಸಿಗುವಂತಾಗಲು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು. ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಹತ್ತು ಲಕ್ಷ ರೂ.ಪರಿಹಾರ, ಮಾಸಿಕ ಎರಡು ಸಾವಿರ ರೂ.ನಂತೆ ಐದು ವರ್ಷದವರೆಗೆ ಪರಿಹಾರ ನೀಡಲಾಗುತ್ತಿದೆ. ಆ ಮೊತ್ತವನ್ನು ಹೆಚ್ಚಿಸುವ ಬಗ್ಗೆಯೂ ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಕಡಲೆ ಖರೀದಿ ವಿಸ್ತರಣೆಗೆ ಒತ್ತಾಯ: ಇದೇ ವೇಳೆ, ಎಚ್‌.ಕೆ.ಪಾಟೀಲ್‌ ಮಾತನಾಡಿ, ಬೆಂಬಲ ಬೆಲೆಯಡಿ ಕಡಲೆ ಖರೀದಿಗೆ ನಾನಾ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ಖರೀದಿ ಅವಧಿ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next