Advertisement

ಸಾಂಕ್ರಾಮಿಕ ರೋಗಗಳ ತಡೆಗೆ ಕ್ರಮ

10:49 AM Jul 29, 2020 | Suhan S |

ಚಾಮರಾಜನಗರ: ಕೋವಿಡ್‌-19 ಸೋಂಕು ನಿಯಂತ್ರಣವಲ್ಲದೆ, ಸಾಂಕ್ರಾಮಿಕ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೂ ಮುಂಜಾಗ್ರತಾ ಕ್ರಮಕೈಗೊಂಡು, ಜನರ ಆರೋಗ್ಯ ರಕ್ಷಣೆಗೆ ಮುಂದಾಗುವಂತೆ ಜಿಪಂ ಅಧ್ಯಕ್ಷ ಎಂ. ಅಶ್ವಿ‌ನಿ ಸೂಚಿಸಿದರು.

Advertisement

ನಗರದ ಜಿಲ್ಲಾಡಳಿತ ಭವನದ ಹಳೇ ಕೆಡಿಪಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಿ, ಸೂಕ್ತ ಚಿಕಿತ್ಸೆ ಪಡೆಯಬೇಕು. ಸಣ್ಣ ಮಕ್ಕಳು ಮತ್ತು ಗರ್ಭಿಣಿಯರಿಗೆ ನೀಡುವಂತಹ ಚುಚ್ಚುಮದ್ದುಗಳನ್ನು ಮುಂಜಾಗ್ರತಾವಾಗಿ ನೀಡಬೇಕು. ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಆರೋಗ್ಯ ಇಲಾಖೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅವಕಾಶಮಾಡಿಕೊಡಬೇಕು. ಕಾಮಗಾರಿ ನಡೆಯುತ್ತಿರುವ ರಸ್ತೆಯ ಬಗ್ಗೆ ಸಚಿತ್ರ ವರದಿ ನೀಡಬೇಕು ಮತ್ತು ರಸ್ತೆ ಸುರಕ್ಷತೆಗಳ ಬಗ್ಗೆ ಜನರಿಗೆ ಮಾಹಿತಿ ತಿಳಿಸಬೇಕು ಎಂದು ಸೂಚಿಸಿದರು. ಜಿಪಂ ಉಪಾಧ್ಯಕ್ಷೆ ಶಶಿಕಲಾ ಮಾತನಾಡಿ, ಕೋವಿಡ್‌-19 ನಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೋವಿಡ್ ಯೋಧರಿಗೆ ಧೈರ್ಯ ತುಂಬುವ ಕೆಲಸ ಎಲ್ಲರಿಂದ ಆಗಬೇಕು. ಅವರ ಕರ್ತವ್ಯಕ್ಕೆ ಪ್ರೇರೇಪಣೆಯನ್ನು ನೀಡಬೇಕು ಎಂದು ತಿಳಿಸಿದರು.

ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಪಿ. ಸದಾಶಿವಮೂರ್ತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಡಿ ಲೇಖಾ, ಜಿಪಂ ಸಿಇಒ ಹರ್ಷಲ್‌ ಬೋಯರ್‌ ನಾರಾಯಣರಾವ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ರಮೇಶ್‌, ಇಒ ಪ್ರಭುಸ್ವಾಮಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next