Advertisement

Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ

08:44 PM Dec 16, 2024 | Team Udayavani |

ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಅದರಲ್ಲೂ ಕೋಲಾರ ಮತ್ತು ಬೆಳಗಾವಿ ಸೇರಿದಂತೆ ಗಡಿ ಭಾಗದ ಜಿಲ್ಲೆಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಈ ಹಾವಳಿ ತಡೆಗೆ ಸರ್ಕಾರ ಕಾನೂನು ಕ್ರಮಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

Advertisement

ವಿಧಾನ ಪರಿಷತ್ತಿನಲ್ಲಿ ಗೋವಿಂದರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ನಕಲಿ ಕ್ಲಿನಿಕ್‌ಗಳ ವಿರುದ್ಧ ಕೆಪಿಎಂಇ ತಿದ್ದುಪಡಿ ಅಧಿನಿಯಮದಡಿ ಕಠಿಣ ಕ್ರಮ ವಹಿಸುವ ಭರವಸೆ ನೀಡಿದರು.

ಕೋಲಾರ ಜಿಲ್ಲೆಯಲ್ಲಿ ಜನವರಿ 2021ರಿಂದ ಇಲ್ಲಿಯವರೆಗೆ 134 ನಕಲಿ ವೈದ್ಯರ ಕ್ಲಿನಿಕ್‌ ಪತ್ತೆಯಾಗಿವೆ. 16 ಕ್ಲಿನಿಕ್‌ಗಳನ್ನು ಸೀಜ್‌ ಮಾಡಲಾಗಿದೆ. 8 ಕೇಸು ದಾಖಲಾಗಿವೆ. 7 ವಿಚಾರಣೆ ಹಂತದಲ್ಲಿವೆ. 102 ಕ್ಲಿನಿಕ್‌ ಮುಚ್ಚಿಸಿ ಕ್ರಮವಹಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next