Advertisement

ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

03:45 AM Jun 16, 2017 | Team Udayavani |

ವಿಧಾನಪರಿಷತ್ತು: ಸರ್ಕಾರ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದೆ. ಆದರೆ, ಅವುಗಳ ಬಗ್ಗೆ ಪ್ರಚಾರ ಆಗುತ್ತಿಲ್ಲ ಎಂಬ ಆರೋಪವಿದ್ದು, ಈ ಬಗ್ಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಕಾಂಗ್ರೆಸ್ಸಿನ ಆರ್‌.ಪ್ರಸನ್ನಕುಮಾರ್‌, ಸರ್ಕಾರದ ಒಳ್ಳೆಯ ಕಾರ್ಯಕ್ರಮಗಳ ಬಗ್ಗೆ ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಹೋಬಳಿ ಮಟ್ಟದಲ್ಲಿ ಪ್ರಚಾರ ಫ‌ಲಕಗಳನ್ನು ಅಳವಡಿಸಬೇಕು ಎಂದು ಸಲಹೆ ನೀಡಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಹೌದು, ಸರ್ಕಾರ ಸಾಕಷ್ಟು ಒಳ್ಳೆಯ ಯೋಜನೆಗಳನ್ನು ಜಾರಿಗೆ ತಂದಿದೆ.
ನಮ್ಮ ದುರಂತ ಏನೆಂದರೆ, ಅವುಗಳ ಬಗ್ಗೆ ಪ್ರಚಾರ ಆಗುತ್ತಿಲ್ಲ ಎಂಬ ಆರೋಪ ನಮ್ಮ ಮೇಲಿದೆ ಎನ್ನುತ್ತ, ಹೌದೇನÅಪ್ಪ
ಎಂದು ಕಾಂಗ್ರೆಸ್‌ ಸದಸ್ಯರಿಗೆ ಕೇಳಿದರು. ಆಗ ಎಲ್ಲ ಸದಸ್ಯರು ಹೌದು ಎಂದರು. ಆಯಿತು, ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಿಸಿದರು.

ಈ ವೇಳೆ, ಮಧ್ಯಪ್ರವೇಶಿಸಿದ ಬಿಜೆಪಿಯ ಅಮರನಾಥ ಪಾಟೀಲ್‌, ಮುಖ್ಯಮಂತ್ರಿಯವರೇ, ಪ್ರಚಾರ ನಾಮಫ‌ಲಕ ಅಳವಡಿಸಲು ಇಲ್ಲಿವರೆಗೆ ಎಷ್ಟು ಹಣ ಖರ್ಚು ಮಾಡಿದ್ದೀರಿ ಎಂದು ಕೇಳಿದರು. “ಎಷ್ಟು ಖರ್ಚು ಆಗಿದೆ ಎಂದು ಮಾಹಿತಿ ನೀಡಲು ನಾನು ಸಿದ್ಧ. ಆದರೆ, ಮೊದಲು ನಿಮ್ಮ ಮೋದಿಯವರು ಎಷ್ಟು ಖರ್ಚು ಮಾಡಿದ್ದಾರೆ ಎಂದು ಮಾಹಿತಿ ತರಿಸಿಕೊಳ್ಳಿ’ ಎಂದು ಮುಖ್ಯಮಂತ್ರಿ ಟಾಂಗ್‌ ನೀಡಿದರು.

ಹಳ್ಳಿಗಳಿಗೂ ಇ-ಆಫೀಸ್:
ಈಗಾಗಲೇ 10 ಇಲಾಖೆಗಳಿಗೆ ಇ-ಆಫೀಸ್ ವ್ಯವಸ್ಥೆ ಅಳವಡಿಸಲಾಗಿದೆ. ಇದನ್ನು ಗ್ರಾಪಂ ಮಟ್ಟಕ್ಕೂ ವಿಸ್ತರಿಸುವ
ಉದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ಇದೇ ವೇಳೆ ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಮುಖ್ಯಮಂತ್ರಿಯವರು ಉತ್ತರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next