Advertisement
ನಗರದ ವಿಮ್ಸ್ ಆವರಣದಲ್ಲಿ ಸಾರ್ವಜನಿಕರ ಬಳಕೆಗೆ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂಆರ್‌ಐ), ಗ್ರಂಥಾಲಯ, ಉಪನ್ಯಾಸಕರ ಸಭಾಂಗಣ ಮತ್ತು ಪರಿಕ್ಷಾ ಸಭಾಂಗಣ, 300 ವಿದ್ಯಾರ್ಥಿಗಳ ಆಸನ ಸಾಮರ್ಥ್ಯದ ಉಪನ್ಯಾಸ ರಂಗಮಂದಿರ, ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ದಂತ ವೈದ್ಯಕೀಯ ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಾಣಕ್ಕೆ ಆನ್‌ಲೈನ್ ಮೂಲಕ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
Related Articles
Advertisement
ಹೀಗಾಗಿ ಪೋಷಕರು ತಮ್ಮ ಚಿಕ್ಕ ಚಿಕ್ಕ ಮಕ್ಕಳನ್ನು ಕರೆದೊಯ್ದು ಲಸಿಕೆ ಹಾಕಿಸುತ್ತಿದ್ದ ಮಾದರಿಯಲ್ಲೇ ಇಂದು ಯುವಕರು ತಮ್ಮ ತಮ್ಮ ವಯಸ್ಸಾದ ಪೋಷಕರನ್ನು ಕರೆದೊಯ್ದು ಕೋವಿಡ್ ಲಸಿಕೆಯನ್ನು ಹಾಕಿಸುವ ಮೂಲಕ ಸೋಂಕನ್ನು ನಿಯಂತ್ರಿಸಲು ಸಹಕರಿಸಬೇಕು. ಜತೆಗೆ ಗುಂಪು ಸೇರದಂತೆ ಮಾಸ್ಕ್, ಸ್ಯಾನಿಟೈಸರ್ ಬಳಸಿ, ಸಾಮಾಜಿಕ ಅಂತರವನ್ನು ಕಾಪಾಡುವ ಮೂಲಕ ಜನರೇ ಸ್ವಯಂ ಜನತಾ ಕರ್ಫ್ಯೂವನ್ನು ವಿಧಿ ಸಿಕೊಳ್ಳಬೇಕು ಎಂದು ಕೋರಿದರು.
ದೇಶದಲ್ಲಿ ಕಳೆದ ವರ್ಷ 157 ವೈದ್ಯಕೀಯ ಕಾಲೇಜುಗಳು ಆರಂಭವಾಗಿದ್ದು ಈ ಪೈಕಿ ರಾಜ್ಯದಲ್ಲಿ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ಇದರಿಂದ ರಾಜ್ಯದಲ್ಲಿ 27000 ವಿದ್ಯಾರ್ಥಿಗಳು ಎಂಬಿಬಿಎಸ್ ಪ್ರವೇಶಕ್ಕೆ ನೆರವಾಗಲಿದೆ ಎಂದವರು ಸ್ಪಷ್ಟಪಡಿಸಿದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್, ಸಂಸದ ವೈ. ದೇವೇಂದ್ರಪ್ಪ, ಶಾಸಕರಾದ ಜಿ.ಕರುಣಾಕರರೆಡ್ಡಿ, ಕೆ.ಸಿ. ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಡಿಸಿ ಪವನ್‌ಕುಮಾರ್ ಮಾಲಪಾಟಿ, ಎಡಿಸಿ ಮಂಜುನಾಥ್, ವಿಮ್ಸ್ ನಿರ್ದೇಶಕ ಡಾ| ಗಂಗಾಧರಗೌಡ, ಅಧಿಧೀಕ್ಷಕ ಮರಿರಾಜ್ ಸೇರಿದಂತೆ ಹಲವರು ಇದ್ದರು. ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಆರೋಗ್ಯ ಕ್ಷೇತ್ರಕ್ಕೆ ವಿಮ್ಸ್ ಕೊಡುಗೆ ಅಪಾರ: ಸಚಿವ ಡಾ| ಸುಧಾಕರ್ ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರುವ ಒಂದು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ವಿಮ್ಸ್ ಆವರಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದೆ. ಹೀಗಾಗಿ ಬೆಳಗಾವಿ ಲೋಕಸಭೆ, ಮಸ್ಕಿ, ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವುದು ಶತಃಸಿದ್ಧ. ಆಡಳಿತಾರೂಢ ಪಕ್ಷ ಯಾವುದೇ ಇರಲಿ ಉಪಚುನಾವಣೆಯಲ್ಲಿ ಸೋತಿರುವ ಉದಾಹರಣೆಯಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಗರ ಶಾಸಕ ಸೋಮಶೇಖರ ರೆಡ್ಡಿಗೆ ಬಿಟ್ಟದ್ದು. ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿಯವರು ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆಯ ಜವಾಬ್ದಾರಿ ವಹಿಸಲಿದ್ದಾರೆ.
ಅವರೇ ನಗರ ಶಾಸಕರಾಗಿರುವುದರಿಂದ ರಾಜ್ಯ ನಾಯಕರು ಈ ಜವಾಬ್ದಾರಿಯನ್ನು ಅವರಿಗೆ ವಹಿಸಬಹುದು ಎಂದು ನಾನು ಭಾವಿಸಿದ್ದೇನೆ. ಅಕಾಂಕ್ಷಿಗಳ ಪಟ್ಟಿ ಹೆಚ್ಚಿದ್ದರೆ ಅವರನ್ನು ಮನವೊಲಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡೋ ಪ್ರಕ್ರಿಯೆಯಲ್ಲಿ ನಾವೆಲ್ಲರೂ ಸಕ್ರಿಯರಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು. ತುಂಗಭದ್ರಾ ಜಲಾಶಯದ ಎಲ್‌ಎಲ್‌ಸಿ ಕಾಲುವೆಗೆ ಇದೇ ಏಪ್ರಿಲ್ 10ರವರೆಗೆ ನೀರು ಹರಿಸಲಾಗುವುದು ಎಂದ ಅವರು, ಈ ಕುರಿತು ಈಗಾಗಲೇ ಆದೇಶವನ್ನು ಹೊರಡಿಸಲಾಗಿದೆ ಎಂದರು.
ಗುತ್ತಿಗೆದಾರರಿಗೆ ಹಣದ ಸಮಸ್ಯೆ: ನಗರದ ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರ ಆರ್ಥಿಕವಾಗಿ ಸದೃಢವಾಗಿಲ್ಲದಿರುವುದು ಆಸ್ಪತ್ರೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯಲು ಕಾರಣವಾಗಿದೆ. ಈ ಕುರಿತು ಸರ್ಕಾರದ ಗಮನ ಸೆಳೆದು ಹೆಚ್ಚುವರಿ ಅನುದಾನ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಕಾಮಗಾರಿಗೆ ವೇಗ ನೀಡಬೇಕಾಗಿದೆ ಎಂದರು.