Advertisement

ಹೊಸ ತಾಲೂಕುಗಳಲ್ಲಿ ಆಡಳಿತ ಆರಂಭಿಸಲು ಕ್ರಮ

10:52 AM Jun 08, 2017 | |

ವಿಧಾನಪರಿಷತ್‌: ಹೊಸದಾಗಿ ಘೋಷಣೆಯಾಗಿರುವ 49 ತಾಲೂಕುಗಳಲ್ಲಿ ಆಡಳಿತ ಆರಂಭಿಸಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಕಾಂಗ್ರೆಸ್‌ನ ಎನ್‌.ಎಸ್‌.ಬೋಸರಾಜು ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ತಾಲೂಕುಗಳನ್ನು ರಚಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗೆಯೇ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಜಾಗ ಗುರುತಿಸಿ ಪ್ರಸ್ತಾವ ಸಲ್ಲಿಸಲೂ ತಿಳಿಸಲಾಗಿದೆ. ಜಿಲ್ಲಾಧಿಕಾರಿಗಳು ಪ್ರಸ್ತಾವ ಸಲ್ಲಿಸಿದ ಕೂಡಲೇ ಮುಂದಿನ ಕ್ರಮವನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next