ಧಾರವಾಡ: ಲಾಕ್‌ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಒಳಗಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಕಾರ್ಮಿಕ ಇಲಾಖೆ ಮೂಲಕ ಆಹಾರ ಸಾಮಗ್ರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪಾರದರ್ಶಕವಾಗಿ ಮತ್ತು ಗುರುತಿನ ಚೀಟಿ ಹೊಂದಿರುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ, ಕಂದಾಯ ಮತ್ತು ಆಹಾರ ಇಲಾಖೆ ಅಧಿ ಕಾರಿಗಳ ಮೂಲಕ ಆಹಾರ ಕಿಟ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ನಿತೇಶ ಪಾಟೀಲ ಹೇಳಿದರು.
ಕಾರ್ಮಿಕ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಸಭೆ ಕೈಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಜಿಲ್ಲೆಯ ನೋಂದಾಯಿತ ಸುಮಾರು 79 ಸಾವಿರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿತರಿಸಲು ಆಹಾರ ಕಿಟ್ ಗಳನ್ನು ಹಂತ ಹಂತವಾಗಿ ಜಿಲ್ಲೆಗೆ ಸರಬರಾಜು ಮಾಡಲಾಗುತ್ತಿದೆ. ಕಾರ್ಮಿಕ ಇಲಾಖೆ ಅ ಧಿಕಾರಿಗಳು ನೋಂದಾಯಿತ ಕಟ್ಟಡ ಕಾರ್ಮಿಕರ ವಿವರಗಳನ್ನು ಗ್ರಾಮ ಹಾಗೂ ನಗರದ ವಾರ್ಡ್‌ಗಳ ಪ್ರಕಾರ ವಿಂಗಡಿಸಿ ಕಂದಾಯ ಇಲಾಖೆಗೆ ನೀಡಬೇಕು. ಪಾಲಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅವರ ವಿಳಾಸದ ಸಮೀಪದಲ್ಲಿರುವ ಪಡಿತರ ವಿತರಣಾ ಕೇಂದ್ರದ ಮೂಲಕ ನೀಡಲು ಕ್ರಮವಹಿಸಬೇಕು ಎಂದರು.
ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಗುರುತಿನ ಚೀಟಿ ತೋರಿಸಿ ಪಡಿತರ ವಿತರಕರಲ್ಲಿ ವಿವರಗಳನ್ನು ದಾಖಲಿಸಿ ಆಹಾರ ಕಿಟ್ ಪಡೆದುಕೊಳ್ಳುವಂತೆ ಕಾರ್ಮಿಕ ಇಲಾಖೆ ಅ ಧಿಕಾರಿಗಳು ಮಾಹಿತಿ ನೀಡಬೇಕು. ಕಾರ್ಮಿಕ ಇಲಾಖೆ ಅ ಧಿಕಾರಿಗಳು ಆಯಾ ಶಾಸಕರಿಗೆ ಅವರ ಮತಕ್ಷೇತ್ರ ವ್ಯಾಪ್ತಿಯ ನೋಂದಾಯಿತ ಕಟ್ಟಡ ಕಾರ್ಮಿಕರ ವಿವರಗಳನ್ನು ನೀಡಬೇಕು ಮತ್ತು ಶಾಸಕರ ಸಮ್ಮುಖದಲ್ಲಿ ಕಾರ್ಯಕ್ರಮ ಏರ್ಪಡಿಸಿ ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿಸಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಡಾ| ಸುಶೀಲಾ ಬಿ., ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ| ಗೋಪಾಲಕೃಷ್ಣ ಬಿ., ಪ್ರೊಬೆಷನರಿ ಐಎಎಸ್ ಅಧಿ ಕಾರಿ ಮಾಧವ ಗಿತ್ತೆ, ತಹಶೀಲ್ದಾರ್ ಡಾ| ಸಂತೋಷ ಬಿರಾದಾರ, ಪ್ರಕಾಶ ನಾಶಿ, ಶಶಿಧರ ಮಾಡ್ಯಾಳ, ಅಶೋಕ ಶಿಗ್ಗಾಂವಿ, ಕೊಟ್ರೇಶ ಗಾಳಿ, ನವೀನ ಹುಲ್ಲೂರ, ಅಮರೇಶ ಪಮ್ಮಾರ, ಪ್ರಭಾರಿ ಸಹಾಯಕ ಕಾರ್ಮಿಕ ಆಯುಕ್ತ ಮಲ್ಲಿಕಾರ್ಜುನ ಜೋಗುರ, ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ ಇದ್ದರು.