Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ವರ್ಷ ದಸರಾ ರಜೆಯಲ್ಲಿ ವ್ಯತ್ಯಾಸಗಳಾಗಿವೆ. ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಜೆಯಲ್ಲಿ ಮಾರ್ಪಾಟು ಮಾಡಲಾಗಿದೆ. ಇದನ್ನು ನಿವಾರಿಸಿ ಏಕರೂಪದ ರಜೆ ನಿಗದಿಪಡಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ಕ್ರಮ ಕೈಗೊಳ್ಳಲಾಗುವುದು. ಹಬ್ಬಗಳಿಗೆ ಹೊಂದಿಕೆಯಾಗುವಂತೆ ರಜೆಗಳನ್ನು ಶೈಕ್ಷಣಿಕ ವರ್ಷದ ಆರಂಭದಲ್ಲೇ ಪ್ರಕಟಿಸಲಾಗುವುದು ಎಂದರು.
ಮಧ್ಯಾಂತರ ವರದಿ ಅಧ್ಯಯನ
ವಕ್ಫ್ ಆಸ್ತಿಗಳಿಗೆ ಸಂಬಂಧಪಟ್ಟು ಉಪ ಲೋಕಾಯುಕ್ತರು ಸಲ್ಲಿಸಿರುವ ಮಧ್ಯಾಂತರ ವರದಿಯನ್ನು ರಾಜ್ಯ ಸರಕಾರ ಪರಿಶೀಲನೆ ಮಾಡುತ್ತಿದೆ ಎಂದು ಸಚಿವ ತನ್ವೀರ್ ಹೇಳಿದರು. ವಕ್ಫ್ ಆಸ್ತಿ ರಕ್ಷಣೆಗೆ ಸರಕಾರ ಅವಶ್ಯ ಕ್ರಮಗಳನ್ನು ಕೈಗೊಂಡಿದ್ದು, ಕಾನೂನು ಬಿಗಿಗೊಳಿಸಲಾಗಿದೆ. ಪ್ರಕರಣಗಳ ವಿಚಾರಣೆಗೆ ಬೆಂಗಳೂರು ಹಾಗೂ ಮೈಸೂರು ವಿಭಾಗಕ್ಕೆ ಒಂದು ಹಾಗೂ ಬೆಳಗಾವಿ ಹಾಗೂ ಕಲ್ಬುರ್ಗಿ ವಿಭಾಗಕ್ಕೆ ಒಂದರಂತೆ ಬಹು ಸದಸ್ಯತ್ವದ ಟ್ರಿಬ್ಯೂನಲ್ ರಚಿಸಿದ್ದು, ಸಂಚಾರಿ ಪೀಠದ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದೆ. ಇದರ ಜತೆಗೆ ವಕ್ಫ್ ಆಸ್ತಿಗಳ ರಕ್ಷಣೆಗೆ ಎಸ್‌ಪಿ ಶ್ರೇಣಿಯ ಅಧಿಕಾರಿಯೋರ್ವರ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸುವ ಪ್ರಸ್ತಾವನೆ ಇದೆ ಎಂದವರು ವಿವರಿಸಿದರು.
Related Articles
Advertisement