Advertisement

ಬಾಗಲಕೋಟೆ ನಗರ ಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಕ್ರಮ: DCM ಕಾರಜೋಳ

08:14 PM Jan 17, 2020 | mahesh |

ಬೆಂಗಳೂರು: ಬಾಗಲಕೋಟೆ ನಗರ ಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದೆರ್ಜೆಗೇರಿಸಲು ಕ್ರಮಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಉಪಮುಖ್ಯಮಂತ್ರಿಗಳಾದ  ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

Advertisement

ವಿಧಾನ ಸೌಧದಲ್ಲಿಂದು ಬಾಗಲಕೋಟೆ ನಗರಾಭಿವೃದ್ಧಿ ಕುರಿತ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಾಗಲಕೋಟೆ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಈಗಾಗಲೇ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಬಾಗಲಕೋಟೆ ನಗರವು ಹಿನ್ನೀರಿನಿಂದ ಮುಳುಗಡೆಯಾಗಿದ್ದು, ಜನತೆ ಸ್ಥಳಾಂತರಗೊಂಡಿದ್ದಾರೆ. ಅವರಿಗೆ ಹೆಚ್ಚಿನ ಮೂಲಭೂತ ಮೂಲಭೂತಸೌಕರ್ಯಗಳನ್ನು ಒದಗಿಸಲು ಅನುಕೂನಿವಾಗುವಂತೆ ಈ ಪ್ರಸ್ತಾವನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಂಜೂರು ಮಾಡಬೇಕು ಎಂದು ಅವರು ತಿಳಿಸಿದರು.

ಬಾಗಲಕೋಟೆ ನಗರದಲ್ಲಿ 24*7 ಕುಡಿಯುವ ನೀರು ಪೂರೈಕೆಗೆ ಕ್ರಮಕೈಗೊಳ್ಳಬೇಕು. ಬಾಗಲಕೋಟೆ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸಮರ್ಪಕ ಸರಬರಾಜಿಗೆ ಅನುಕೂಲವಾಗುವಂತೆ ಜಲಧಾರೆ ಯೋಜನೆಯನ್ನು ಜಾರಿಗೊಳಿಸಬೇಕು. ಈ ಯೋಜನೆಯ ಅನುಷ್ಟಾನಕ್ಕೆ ಒಂದು ನೆಟ್‍ವರ್ಕ್ ರೂಪಿಸಿ, ಎಲ್ಲಾ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲಾಗುವುದು. ನಿರ್ವಹಣೆಯನ್ನು ಪ್ರತ್ಯೇಕ ನಿಗಮವು ಮಾಡಲಿದೆ. ಇದರಿಂದ ಸಮರ್ಪಕವಾಗಿ ನೀರು ಪೂರೈಕೆಯಾಗುವುದರ ಜೋತೆಗೆ ಮಿತವಾಗಿ ಬಳಕೆಗೆ ಅನುಕೂಲವಾಗುತ್ತದೆ ಎಂದು ಡಿಸಿಎಂ ತಿಳಿಸಿದ ಕೂಡಲೇ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀ ಅಂಜು ಪರವೇಜ್ ಅವರು ಬಾಗಲಕೋಟೆ ಜಿಲ್ಲೆಯು ಜಲಧಾರೆ ಯೋಜನೆಯ ಅನುಷ್ಟಾನಕ್ಕೆ ಸೂಕ್ತವಾಗಿದ್ದು, ಈ ಯೋಜನೆಯನ್ನು ಅನುಷ್ಟಾನಗೊಳಿಸುವುದಾಗಿ ಸಮ್ಮತಿ ಸೂಚಿಸಿದರು.

ಬಾಗಲಕೋಟೆ ನಗರ ಸಭೆ ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರು ಸರಬರಾಜು ಯೋಜನೆಗಳ ಪ್ರಸ್ತಾವನೆಗಳನ್ನು ಮಂಜೂರು ಮಾಡಬೇಕು. ಒಳಚರಂಡಿ ಕಾಮಗಾರಿಗಳ ಪ್ರಸ್ತಾವನೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸಿ ಮಂಜೂರು ಮಾಡಬೇಕು ಎಂದು ಡಿಸಿಎಂ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಶ್ರೀ ವೀರಣ್ಣ ಚರಂತಿ ಮಠ, ಶ್ರೀ ದೊಡ್ಡನಗೌಡ ಪಾಟೀಲ್ ಅವರು ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗಳ ವ್ಯವಸ್ಥಿತ ಅನುಷ್ಠಾನ ಕುರಿತು ಚರ್ಚಿಸಿದರು. ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next