Advertisement

ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಕ್ರಮ

11:23 PM Mar 08, 2022 | Team Udayavani |

ಬೆಂಗಳೂರು: ಉಕ್ರೇನ್‌ನಿಂದ ವಾಪಸಾಗಿರುವ ರಾಜ್ಯದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸರಕಾರ ಗಮನ ಹರಿಸಬೇಕು. ಅವರ ವ್ಯಾಸಂಗಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ನ ಯು.ಟಿ. ಖಾದರ್‌ ಸರಕಾರವನ್ನು ಒತ್ತಾಯಿಸಿದ್ದಾರೆ.

Advertisement

ಶೂನ್ಯ ವೇಳೆ ವಿಷಯ ಪ್ರಸ್ತಾವಿಸಿದ ಅವರು, ಉಕ್ರೇನ್‌ನಿಂದ ವಾಪಸಾದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಪೋಷಕರು ಆತಂಕಗೊಂಡಿದ್ದಾರೆ. ಇದನ್ನು ನಿವಾರಿಸುವ ಕೆಲಸ ಸರಕಾರದಿಂದ ಆಗಬೇಕು. ಎಂದು ಹೇಳಿದರು. ನೀಟ್‌ ವ್ಯವಸ್ಥೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವ ನಿಟ್ಟಿನ ಲ್ಲಿಯೂ ಪುನರ್‌ ಪರಿಶೀಲನೆ ಅಗತ್ಯ ಎಂದರು.

ಇದಕ್ಕೆ ಉತ್ತರಿಸಿದ ಸಚಿವ ಡಾ| ಕೆ. ಸುಧಾಕರ್‌, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಯವರು ಸಭೆ ನಡೆಸಿ ಚರ್ಚಿಸಿದ್ದಾರೆ. ಸರಕಾರವು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುತ್ತದೆ ಎಂದರು.

ರಾಜ್ಯದಲ್ಲಿ ತಾಲೂಕು ಹಂತದಲ್ಲಿ ನೀಟ್‌ ಕೋಚಿಂಗ್‌ ಕೊಡಲು ಯೋಜನೆ ರೂಪಿಸಲಾಗುತ್ತಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ. 50 ಸೀಟುಗಳಿಗೆ ಸರಕಾರಿ ಶುಲ್ಕದಡಿ ನೀಡವಂತಹ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ಸರಕಾರ ಚಿಂತಿಸಿದೆ. ಇದರಿಂದ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next