Advertisement

ಭಾರತದಲ್ಲಿ 24ಗಂಟೆಯಲ್ಲಿ 6,422 ಕೋವಿಡ್ ಸೋಂಕು ಪ್ರಕರಣ ಪತ್ತೆ, 34 ಮಂದಿ ಸಾವು

04:01 PM Sep 15, 2022 | Team Udayavani |

ನವದೆಹಲಿ: ಕಳೆದ 24ಗಂಟೆಯಲ್ಲಿ ಭಾರತದಲ್ಲಿ 6,422 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,45,16,479 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಸೆಪ್ಟೆಂಬರ್ 15) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ರಾಜಕೀಯದ ಗೋಸುಂಬೆ: ಗುಲಾಂ ನಬಿಗೆ ಭಯೋತ್ಪಾದಕ ಸಂಘಟನೆಯಿಂದ ಜೀವ ಬೆದರಿಕೆ

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 46,389ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 34 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.71ರಷ್ಟಿದೆ.

ಒಂದೇ ದಿನದಲ್ಲಿ 640 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.2.04ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.1.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next