Advertisement

ಭಾರತದಲ್ಲಿ 24ಗಂಟೆಯಲ್ಲಿ 6,298 ಕೋವಿಡ್ ಪ್ರಕರಣ ಪತ್ತೆ, 23 ಮಂದಿ ಸಾವು

12:14 PM Sep 16, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 6,298 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,45,22,777 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಸೆ.16) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಸಾರ್ವಕಾಲಿಕ ಶ್ರೇಷ್ಠ ಟೆನ್ನಿಸಿಗ ರೋಜರ್ ಫೆಡರರ್ ಆಸ್ತಿ ಎಷ್ಟು ಗೊತ್ತಾ?

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 46,748ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 23 ಮಂದಿ ಸಾವನ್ನಪ್ಪಿದ್ದಾರೆ. ಭಾರತದಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,273ಕ್ಕೆ ಏರಿಕೆಯಾಗಿದೆ.

ಭಾರತದ ಕೋವಿಡ್ ಚೇತರಿಕೆ ಪ್ರಮಾಣ ಶೇ.98.71ರಷ್ಟಿದೆ. 24ಗಂಟೆಯ ಅವಧಿಯಲ್ಲಿ 359 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿನ ಪ್ರತಿದಿನದ ಪಾಸಿಟಿವಿಟಿ ದರ ಶೇ.1.89ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.70ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,39,47,756 ಕೋಟಿಗೆ ತಲುಪಿದೆ. ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 216.17 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next