ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 7,633 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 61,233ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಈವರೆಗೆ ಸಾವಿನ ಸಂಖ್ಯೆ 5,31,152 ಕ್ಕೆ ಏರಿದೆ.
ಮಂಗಳವಾರ ಬೆಳಗ್ಗೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೆಹಲಿ ಮತ್ತು ಕೇರಳದಲ್ಲಿ ತಲಾ ನಾಲ್ವರು, ಹರಿಯಾಣ,ಕರ್ನಾಟಕ ಮತ್ತು ಪಂಜಾಬ್ ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.47ಕೋಟಿ((4,48,34,859) ದಾಖಲಾಗಿದೆ.ಕೋವಿಡ್ ಚೇತರಿಕೆ ದರ 98.68 ಪ್ರತಿಶತದಷ್ಟು ದಾಖಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,42,42,474 ಕ್ಕೆ ಏರಿದೆ ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.18 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಕೋವಿಡ್ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ಭಾರತದಲ್ಲಿ 220.66ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.