Advertisement

ಭಾರತದಲ್ಲಿ 24ಗಂಟೆಯಲ್ಲಿ 4,510 ಕೋವಿಡ್ ಸೋಂಕು ಪ್ರಕರಣ ಪತ್ತೆ, 33 ಮಂದಿ ಸಾವು

12:29 PM Sep 21, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,510 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,45,47,599 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಸೆ.20) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಹಿಜಾಬ್ ವಿರೋಧಿ ಪ್ರತಿಭಟನೆ; ಇರಾನ್ ನಲ್ಲಿ ಭದ್ರತಾ ಪಡೆ ಗುಂಡಿಗೆ ಐವರು ಸಾವು

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 46,216ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 33 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,403ಕ್ಕೆ ತಲುಪಿದೆ.

ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ 98.71ರಷ್ಟಿದೆ. 24ಗಂಟೆಯಲ್ಲಿ 1,163 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಭಾರತದಲ್ಲಿ ಪ್ರತಿದಿನದ ಪಾಸಿಟಿವಿಟಿ ದರ ಶೇ.1.33ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.1.80ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next