Advertisement

ಭಾರತದಲ್ಲಿ 24ಗಂಟೆಯಲ್ಲಿ 7,946 ಕೋವಿಡ್ ಸೋಂಕು ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ

11:23 AM Sep 01, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 7,946 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,44,36,339 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಸೆಪ್ಟೆಂಬರ್ 01) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಮಂಗಳೂರು ಭೇಟಿ ವೇಳೆ ಪ್ರಧಾನಿ ಮೋದಿಗೆ ಉಡುಗೊರೆಯಾಗಿ ಪರಶುರಾಮ ಪುತ್ಥಳಿ

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 62,748ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 37 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,27,911ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.67ರಷ್ಟಿದೆ. 24ಗಂಟೆಗಳ ಅವಧಿಯಲ್ಲಿ 1,919 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.2.98ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.2.57ರಷ್ಟಿದೆ.

ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,38,45,680ಕ್ಕೆ ತಲುಪಿದೆ. ಸಚಿವಾಲಯದ ಅಂಕಿಅಂಶದ ಪ್ರಕಾರ, ದೇಶಾದ್ಯಂತ 212.52 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next