Advertisement
ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ನನ್ನನ್ನು ಚುನಾವಣೆ ಪ್ರಚಾರಕ್ಕೆ ಕರೆಯದೇ ಇರುವ ಬಗ್ಗೆ ಅಷ್ಟಾಗಿ ನಾನು ಗಮನ ಕೊಟ್ಟಿಲ್ಲ. ನನ್ನ ಅಗತ್ಯ ಎಲ್ಲಿದೆ ಅನಿಸುತ್ತದೆಯೋ ಅಲ್ಲಿಗೆ ಕರೆಯುತ್ತಾರೆ ಎಂದು ಸ್ಪಷ್ಟಪಡಿಸಿದರು.
ಕಳೆದ ಚುನಾವಣೆಯಲ್ಲಿ ಮಂಡ್ಯದಲ್ಲಿ ಯಾರೂ ಇಂತಹ ಡೇಟ್‌ನಲ್ಲಿ ಪ್ರಚಾರಕ್ಕೆ ಬರಬೇಕು ಅಂತಾ ಹೇಳಲಿಲ್ಲ. ನಾನು ಇದನ್ನು ದೊಡ್ಡ ವಿಷಯ ಅಂದುಕೊಂಡಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಇದ್ದಿದ್ದರೆ ನನ್ನನ್ನ ಕರೆಯುತ್ತಿದ್ದರು ಅನಿಸುತ್ತಿದೆ. ಆದರೆ ಮೈತ್ರಿ ಅಭ್ಯರ್ಥಿ ಇರುವುದರಿಂದ ಮಂಡ್ಯ ಲೋಕಸಭಾ ಚುನಾವಣೆ ನೋಡಿ ಕರೆದಿಲ್ಲ. ನಮಗೆ ಜೆಡಿಎಸ್ ನವರ ಮೇಲೆ ದ್ವೇಷವಿಲ್ಲ. ಹಳೆಯ ಕಥೆ ಮುಗಿದಿದೆ. ಈಗಾಗಲೇ ಹೈಕಮಾಂಡ್‌ಗೆ ಈ ಬಗ್ಗೆ ಹೇಳಿದ್ದೇನೆ ಎಂದರು. ಸಕ್ರಿಯ ಪಕ್ಷ ಸಂಘಟನೆಗೆ ಒತ್ತು
ಮಂಡ್ಯದಲ್ಲಿ ಪಕ್ಷವನ್ನು ಬಲಪಡಿಸಬೇಕಿದ್ದು ಜಿಲ್ಲೆಯಲ್ಲಿ ಸಕ್ರಿಯವಾಗಿ ಪಕ್ಷ ಸಂಘಟಿಸುತ್ತೇನೆ. ನಾನು ನಿರೀಕ್ಷೆ ಇಟ್ಟುಕೊಂಡು ಕೆಲಸ ಮಾಡಿಲ್ಲ. ಬೆಂಬಲಿಗರು ಆಸೆ ಪಡುವುದರಲ್ಲಿ ತಪ್ಪಿಲ್ಲ, ನನ್ನ ರಾಜಕಾರಣ ಮಂಡ್ಯದಲ್ಲಿ ಇರುತ್ತದೆ. ಮಂಡ್ಯದಲ್ಲಿ ಬಿಜೆಪಿ ಸಂಘಟನೆ ಹಿಂದಿದ್ದು, ಈ ಬಗ್ಗೆ ಹೈಕಮಾಂಡ್‌ಗೆ ತಿಳಿಸಿದ್ದೇನೆ. ಮೈತ್ರಿ ಇದ್ದಾಗ ಪಕ್ಷ ಸಂಘಟನೆ ಸವಾಲಾಗಿರುತ್ತದೆ. ಜೆಡಿಎಸ್ ಮಂಡ್ಯದಲ್ಲಿ ಬಲಿಷ್ಠವಾಗಿದೆ, ಬಿಜೆಪಿಗೆ ಅಷ್ಟಾಗಿ ಇಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಸಮರ್ಥವಾಗಿ ಕಟ್ಟುವೆ ಎಂದು ತಿಳಿಸಿದರು.