Advertisement

ಸಕ್ರಿಯ ಕ್ಷಯರೋಗ ಪತ್ತೆ-ಚಿಕಿತ್ಸೆ ಆಂದೋಲನಕ್ಕೆ ಚಾಲನೆ

03:02 PM Jul 18, 2017 | Team Udayavani |

ರಾಯಚೂರು: ಸರ್ಕಾರದಿಂದ ಹಮ್ಮಿಕೊಂಡಿರುವ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಬಡ ಜನರಿಗೆ ತಲುಪಬೇಕು. ಆ ಮೂಲಕ ಅವರಿಗೆ ಸೂಕ್ತ ಚಿಕಿತ್ಸೆ ಸಿಗುವಂತಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಹೇಮಲತಾ ಬೂದಪ್ಪ ಹೇಳಿದರು.

Advertisement

ನಗರದ ಹರಿಜನವಾಡದ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಕ್ರಿಯ ಕ್ಷಯರೋಗ ಪತ್ತೆ ವತ್ತು ಚಿಕಿತ್ಸೆ ಆಂದೋಲನಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕ್ಷಯರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಬಡವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಕ್ಷಯ ರೋಗದ ಲಕ್ಷಣಗಳು ಗೋಚರಿಸಿದಲ್ಲಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗದ 
ಅಂಶಗಳಿದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿ ಡಾ| ಸುರೇಂದ್ರಬಾಬು ಮಾತನಾಡಿ, ಜಿಲ್ಲೆಯಲ್ಲಿ ಈ ಆಂದೋಲನ ಜು.31ರವರೆಗೆ 
ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲೆಯ ಜನಸಂಖ್ಯೆಯ ಶೇ.10-15ರಷ್ಟು ಅಂದರೆ
2,36,787 ಜನರನ್ನು ಮತ್ತು 208 ಪ್ರದೇಶಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಸಮೀಕ್ಷೆಗಾಗಿ 304 ತಂಡ ರಚಿಸಲಾಗಿದೆ
ಎಂದು ವಿವರಿಸಿದರು. 

ತಂಡದಲ್ಲಿ ಆರೋಗ್ಯ ಕಾರ್ಯಕರ್ತರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು
ಪಾಲ್ಗೊಳ್ಳುವರು ಎಂದು ಹೇಳಿದರು. ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿದಾಗ ಮನೆಯಲ್ಲಿ ವಾಸಿಸುವ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗದ ಲಕ್ಷಣ ಕಂಡುಬಂದಲ್ಲಿ ರಕ್ತದ ಮಾದರಿ ಪರೀಕ್ಷೆ ಮಾಡಿಸಿದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ರಕ್ತದಲ್ಲಿ ನಕಾರಾತ್ಮಕ ಅಂಶಗಳು ರೋಗಿಗಳಿಗೆ ಮುಂದಿನ ಹಂತವಾಗಿ ಎಕ್ಸ್‌ರೇ ಮತ್ತು ಸಿಬಿನ್ಯಾಟ್‌ ಪರೀಕ್ಷೆ ಮಾಡಿಸಲಾಗುವುದು ಎಂದು ವಿವರಿಸಿದರು. ಡಿಎಚ್‌ಒ ಡಾ| ಎಂ.ಕೆ.ನಸೀರ್‌ ಅಧ್ಯಕ್ಷತೆ ವಹಿಸಿದ್ದರು. ಅನುಷ್ಠಾನಾಧಿಕಾರಿ ಡಾ| ನಾಗರಾಜ, ಡಾ| ಗಣೇಶ, ಡಾ| ಶಿವಕುಮಾರ, ಪ್ರಭಾರ ತಾಲೂಕು ಆರೋಗ್ಯ ಅಧಿಕಾರಿ ಡಾ| ಮಲ್ಲಿಕಾರ್ಜುನ ಗೌಡ, ರಾಮಸ್ವಾಮಿ ಸೇರಿ ಇಲಾಖೆ ಸಿಬ್ಬಂದಿ ಸೇರಿ ಇತರರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next