Advertisement

ಕೈ ಜತೆ ಮೈತ್ರಿಗೆ ಕಾರ್ಯಕರ್ತರ ವಿರೋಧ : ದೇವೇಗೌಡ

08:49 PM Jul 31, 2019 | Team Udayavani |

ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಯಾವುದೇ ಹೊಂದಾಣಿಕೆ ಬೇಡಾ ಅನ್ನೋ ಅಭಿಪ್ರಾಯ ಪಕ್ಷದಲ್ಲಿ ವ್ಯಕ್ತವಾಗಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.

Advertisement

ನಗರದ ಜೆಪಿ ಭವನದಲ್ಲಿ ನಡೆದ ಸಭೆ ಬಳಿಕ ಎಚ್.ಡಿ. ದೇವೇಗೌಡ ಅವರು ಹೇಳಿಕೆ ನೀಡಿದ್ದಾರೆ.

ನೀವು ರಾಜ್ಯ ಮಟ್ಟದಲ್ಲಿ ಒಂದಾಗಿ ಅಧಿಕಾರ ಅನುಭವಿಸಿದ್ರಿ ಆದರೆ ಸ್ಥಳೀಯ ಮಟ್ಟದಲ್ಲಿ ಆ ರೀತಿ ಇಲ್ಲ ಈಗ ಹೊಂದಾಣಿಕೆ ಬೇಡಾ ಎಂದು ಪಕ್ಷದ ಎಲ್ಲರ ಒಮ್ಮತದ ಅಭಿಪ್ರಾಯ..

ಈ ಹಿಂದಿನ ಸ್ಪೀಕರ್ ಅನರ್ಹ ಮಾಡಿರುವ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ನ ತೀರ್ಮಾನ ನೋಡಿಕೊಂಡು ಮುಂದಿನ ಹೆಜ್ಜೆ ಈ ಬಗ್ಗೆ ನಿಮ್ಮ ತೀರ್ಮಾನವೇ ಅಂತಿಮ ಅಂದಿದ್ದಾರೆ ನಮ್ಮ ಸದಸ್ಯರು.

ಚುನಾವಣೆ ಮೂರು ತಿಂಗಳಿಗೆ ಬರುತ್ತೋ, ಆರು ತಿಂಗಳಿಗೆ ಬರುತ್ತೋ ಗೊತ್ತಿಲ್ಲ ಆದರೆ ನಾವು ಮಾತ್ರಾ ಈಗಿನಿಂದಲೇ ಸಿದ್ದತೆ ಮಾಡಿಕೊಳ್ತಾ ಇದೀವಿ..

Advertisement

ರಾಜ್ಯ ಪ್ರವಾಸ ಮಾಡಲು ಎಲ್ಲ ನಾಯಕರಿಗೆ ಸೂಚನೆ ಕೊಟ್ಟಿದ್ದೇನೆ ಜೊತೆಗೆ ಕುಮಾರಸ್ವಾಮಿ ಅವರ ಹದಿನಾಲ್ಕು ತಿಂಗಳ ಸಾಧನೆಗಳನ್ನು ಮನೆಮನೆಗೆ ಮುಟ್ಟಿಸಲು ಸೂಚಿಸಿದ್ದೇನೆ ಎಂದು ತಿಳಿಸಿದ ದೇವೇಗೌಡರು ಆಗಸ್ಟ್ ಏಳನೇ ತಾರೀಖು ಬೆಂಗಳೂರಿನಲ್ಲಿ ಜೆಡಿಎಸ್ ಸಮಾವೇಶ ನಡೆಸುತ್ತೇವೆ,  ಅಲ್ಲಿ ನೂತನ ಜಿಲ್ಲಾ ಅಧ್ಯಕ್ಷರುಗಳನ್ನು ನೇಮಕ ಮಾಡುತ್ತೇವೆ ಎಂದು ತಿಳಿಸಿದರು.

ನಿಷ್ಕ್ರಿಯಗೊಂಡಿರುವ ಇತರ ಘಟಕಗಳನ್ನೂ ಪುನಶ್ಚೇತನ ಮಾಡುತ್ತೇವೆ ಹಾಗೆಯೇ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಜೆಡಿಎಸ್ ಸಕ್ರಿಯ ಗೊಳ್ಳಲಿದೆ. ಪಕ್ಷ ಬಿಟ್ಟು ಹೊರ ಹೋಗಿರುವ ಮೂರು ಜನ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದೇವೆ ಇದೆ ಸಂದರ್ಭದಲ್ಲಿ ಗೌರವಾನ್ವಿತ ಹೊಸ ಸ್ಪೀಕರ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಹಿಂದೆ ಅವರು ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದಾರೆ ಪಕ್ಷಾತೀತವಾಗಿ ಅವರು ಕೆಲಸ ಮಾಡುತ್ತಾರೆ ಎಂಬ ಭರವಸೆ ಇದೆ ಮತ್ತೊಮ್ಮೆ ಅವರಿಗೆ ನನ್ನ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶುಭಹಾರೈಸಿದರು.

Advertisement

Udayavani is now on Telegram. Click here to join our channel and stay updated with the latest news.

Next