ತುಮಕೂರು: ಜಿಲ್ಲೆಯಲ್ಲಿ ಬೇಸಿಗೆ ಆರಂಭವಾಗಿ ರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ತಾತ್ವಾರ ಹೆಚ್ಚಿದ್ದು, ಕೂಡಲೇ ಗಮನ ಹರಿಸಬೇಕು, ಜಿಲ್ಲೆಯ ಅಯಾ ಗ್ರಾಪಂ ವ್ಯಾಪ್ತಿಯಲ್ಲೇ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳನ್ನು ಚುರುಕುಗೊಳಿಸಿ ಕೂಲಿ ಕಾರ್ಮಿಕರ ನೆರವಿಗೆ ಮುಂದಾಗಬೇಕೆಂದು ಒತ್ತಾಯ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೆಪಿಸಿಸಿಮಾಧ್ಯಮ ವಿಶ್ಲೇಷಕ ಮುರಳೀಧರ ಹಾಲಪ್ಪ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷಆರ್.ರಾಮಕೃಷ್ಣ ಅವರೊಂದಿಗೆ ಜಿಪಂ ಕಚೇರಿಗೆತೆರಳಿ ಜಿಪಂ ಸಿಇಒ ಅವರನ್ನು ಭೇಟಿ ಮಾಡಿ ಮನವಿಸಲ್ಲಿಸಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.ಈ ವೇಳೆ ಮಾತನಾಡಿದ ಮುರಳೀಧರ ಹಾಲಪ್ಪ,ತುಮಕೂರು ಜಿಲ್ಲೆ ಬರಪೀಡಿತ ಜಿಲ್ಲೆಯಾಗಿರುವುದರಿಂದ ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಗೊಂಡಿದೆ. ಯಾವ ಯಾವ ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂಬು ದರ ಬಗ್ಗೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಬೋರ್‌ವೆಲ್ ಕೊರೆಸುವಅಥವಾ ಟ್ಯಾಂಕರ್ ಮೂಲಕ ನೀರುಸರಬರಾಜು ಮಾಡಲು ಕ್ರಮ ವಹಿಸಬೇಕೆಂದು ಮನವಿ ಮಾಡಿದರು.
ನರೇಗ ಕೂಲಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಕೂಲಿ ಹಣವನ್ನು ಪಾವತಿಸಬೇಕು,ನರೇಗ ಅಡಿಯಲ್ಲಿ ಹೆಚ್ಚು ಹೆಚ್ಚು ಕೆಲಸ ನೀಡುವಂತೆ ಕೇಂದ್ರ ಸರ್ಕಾರವೂ ಸೂಚಿಸಿರುವ ಹಿನ್ನೆಲೆಯಲ್ಲಿಗರಿಷ್ಠ ಪ್ರಮಾಣದ ಮಾನವ ದಿನಗಳನ್ನು ಸೃಷ್ಟಿಸಲುಅಧಿಕಾರಿಗಳು ಮುಂದಾಗಬೇಕು, ನರೇಗ ಯೋಜ ನೆಯಲ್ಲಿ 275 ರೂ ಕೂಲಿ ಹಣದ ಬದಲಾಗಿ 375 ರೂ. ನೀಡಬೇಕೆಂದು ಒತ್ತಾಯಿಸಿದರು.
ಡಿಆರ್‌ಡಿಎ ಶಾಖೆಯು ನಿರ್ವಹಿಸುವ ವಿವಿಧ ವಸತಿ ಯೋಜನೆಗಳಾದ ಆಶ್ರಯ,ಡಾ.ಅಂಬೇಡ್ಕರ್, ಇಂದಿರಾ ಆವಾಜ್ ಯೋಜನೆ, ಬಸವ ವಸತಿ ಯೋಜನೆಗಳ ಅನುಷ್ಠಾನ, ಆಶ್ರಯನಿವೇಶನ ಯೋಜನೆ ಅನುಷ್ಠಾನ, ವಸತಿ ಯೋಜನೆಗಳಡಿ ಬರುವ ದೂರುಗಳ ಪರಿಶೀಲನೆನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕೆರೆಗಳ ಹೂಳು ತೆಗೆಯುವುದು, ಏರಿ ನಿರ್ಮಾಣ, ಕಂದಕ ಬದುಗಳ ನಿರ್ಮಾಣ, ಕೃಷಿಹೊಂಡ ನಿರ್ಮಾಣ, ಮಳೆ ನೀರು ಸಂಗ್ರಹಕಾಮಗಾರಿ, ಕೊಳವೆ ಬಾವಿಗೆ ಜಲ, ಮರುಪೂರಣ ಗುಂಡಿ, ಸಸಿ ನೆಡುವಿಕೆಯಂತಹ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಅಗತ್ಯವಿದೆ. ರೈತರಿಗೆ ಸಬ್ಸಿಡಿಪ್ರಮಾಣ ಹೆಚ್ಚಿಸಬೇಕು, ಕೃಷಿ ಇಲಾಖೆಯಲ್ಲಿರುವ ಮದ್ಯವರ್ತಿಗಳ ಹಾವಳಿ ಕಡಿವಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಮಸ್ಯೆಗಳನ್ನು ಆಲಿಸಿದ ಸಿಇಒ ಗಂಗಾಧರಸ್ವಾಮಿ, ಎಲ್ಲೆಲ್ಲಿ ಸಮಸ್ಯೆಗಳಿವೆಯೋಅಲ್ಲೆಲ್ಲಾ ಖುದ್ದು ನಾನೇ ಭೇಟಿ ನೀಡಿ ಸಮಸ್ಯೆಗಳನ್ನುಬಗೆ ಹರಿಸಲು ಕ್ರಮ ಕೈಗೊಳ್ಳುತ್ತಿದ್ದೇನೆ ಎಂದರು.
ಕುಡಿವ ನೀರಿನ ಸಮಸ್ಯೆಗೆ ಆಯಾ ಗ್ರಾಪಂಯಲ್ಲಿ 14-15 ಹಣಕಾಸಿನ ಯೋಜನೆಯಅನುದಾನ ಬಳಸಿಕೊಂಡು ಬೋರ್‌ವೆಲ್ ಕೊರೆಸುವುದು ಆಯಾ ಪಂಚಾಯ್ತಿಗಳ ಜವಾಬ್ದಾರಿ, ಈಗಾಗಲೇ ಜಿಲ್ಲೆಯಲ್ಲಿ ಕೊರೆಸಿರುವ ಬೋರ್‌ವೆಲ್ ಗಳಿಗೆ 34 ಕೋಟಿ ರೂ. ಹಣ ಬಾಕಿ ಇದೆ. ಆ ಹಣವನ್ನೇ ಇನ್ನೂ ಪಾವತಿ ಮಾಡಿಲ್ಲ,ಹೊಸ ಬೋರ್‌ವೆಲ್‌ಗಳಿಗೆ ಅನುದಾನದ ಕೊರತೆ ಇದೆ. ಆದ್ದರಿಂದ ಆಯಾ ಪಂಚಾಯ್ತಿಗಳಮೂಲಕವೇ ಅನುದಾನ ಸದ್ಬಳಕೆ ಮಾಡಿಕೊಳ್ಳ ಬೇಕೆಂದು ಸಿಇಒ ಹೇಳಿದರು.