Advertisement

ನಟ ಚೇತನ್‌ಗೆ ಜೀವ ಬೆದರಿಕೆ!

11:01 AM Sep 08, 2017 | |

ಬೆಂಗಳೂರು: ತಮಗೆ ಜೀವ ಬೆದರಿಕೆಯಿದ್ದು, ಸೂಕ್ತ ರಕ್ಷಣೆ ಒದಗಿಸುವಂತೆ “ಆ ದಿನಗಳು’ ಚಿತ್ರದ ಖ್ಯಾತಿಯ ನಟ ಚೇತನ್‌ ನಗರ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಬುಧವಾರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಿರುವ ಚೇತನ್‌, “ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಬೆದರಿಕೆ ಸಂದೇಶಗಳನ್ನು ಪ್ರಕಟಿಸುತ್ತಿದ್ದಾರೆ.

Advertisement

ಅಲ್ಲದೆ ನನ್ನ ಪೋನ್‌ಗೆ ಜೀವ ಬೆದರಿಕೆ ಕರೆಗಳು ಹೆಚ್ಚಾಗಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ರಕ್ಷಣೆ ನೀಡಬೇಕು,’ ಎಂದು ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ಕಳೆದ 5 ವರ್ಷದಿಂದ ಪ್ರಗತಿಪರ ಚಿಂತನೆ, ವಿಚಾರಧಾರೆ, ಹೋರಾಟ ನಡೆಸುತ್ತಿರುವ ನನಗೂ ಜೀವ ಬೆದರಿಕೆ ಇದೆ.

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಬಳಿಕ ಪ್ರಗತಿಪರ ಚಿಂತಕರು, ಹೋರಾಟಗಾರರಿಗೆ ರಕ್ಷಣೆ ನೀಡುವ ಬಗ್ಗೆ ಸರ್ಕಾರ ಭರವಸೆ ನೀಡಿರುವುದರಿಂದ ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿರುವುದಾಗಿ ಚೇತನ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ. “ಈ ಹಿಂದೆ ಇಂತಹ ಬೆದರಿಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಸಾಹಿತಿ ಕಲುರ್ಗಿ, ಗೌರಿ ಲಂಕೇಶ್‌ ಹತ್ಯೆ ಬಳಿಕ ಇವುಗಳನ್ನು ಗಂಭೀರವಾಗಿ ಪರಿಗಣಿಸುವಂತಾಗಿದೆ. ನನ್ನ ಮನವಿಗೆ ಆಯುಕ್ತರು ಸ್ಪಂದಿಸಿದ್ದಾರೆ ಎಂದು ಚೇತನ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next