Advertisement

ನಟಿ ಚೇತನಾ ಸಾವು: ಶಸ್ತ್ರಚಿಕಿತ್ಸೆ ಮಾಡಿದ್ದ ಆಸ್ಪತ್ರೆಗೆ ಬೀಗ

08:56 PM May 19, 2022 | Team Udayavani |

ಬೆಂಗಳೂರು: ನಟಿ ಚೇತನಾ ರಾಜ್‌ ಶಸ್ತ್ರಚಿಕಿತ್ಸೆಗೆ ದಾಖಲಾದ ರಾಜಾಜಿನಗರದ ಡಾ.ರಾಜಕುಮಾರ್‌ ರಸ್ತೆಯಲ್ಲಿರುವ ಡಾ.ಶೆಟ್ಟಿ ಕಾಸ್ಮೆಟಿಕ್‌ ಆಸ್ಪತ್ರೆಗೆ ಆರೋಗ್ಯ ಇಲಾಖೆಯಿಂದ ನೋಟಿಸ್‌ ನೀಡಿ ಮುಚ್ಚಿಸಲಾಗಿದೆ.

Advertisement

ನಟಿ ಚೇತನಾ ರಾಜ್‌  ಡಾ.ಶೆಟ್ಟಿ ಕಾಸ್ಮೆಟಿಕ್‌ ಸೆಂಟರ್‌ಗೆ ದಾಖಲಾಗಿ ಚಿಕಿತ್ಸೆ ಪಡೆದು ಮೃತಪಟ್ಟಿರುವ ಬಗ್ಗೆ ಹಾಗೂ ಸಂಸ್ಥೆಯ ಬಗ್ಗೆ ಮಾಧ್ಯಮಗಳಲ್ಲಿ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನೋಟಿಸ್‌ ನೀಡಲಾಗಿದೆ. ನೋಟಿಸ್‌ ತಲುಪಿದ ಒಂದು ದಿನದಲ್ಲಿ ಸಂಸ್ಥೆಯಿಂದ ಸಮಜಾಯಿಷಿ ನೀಡಬೇಕು. ತಪ್ಪಿದಲ್ಲಿ ಸಂಸ್ಥೆಯ ವಿರುದ್ಧ ಕೆಪಿಎಂಸಿ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next