ಬೆಂಗಳೂರು: ಇತ್ತೀಚಿಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿ ಮದುವೆ ನಂತರದ ಜೀವನ ಎಂಜಾಯ್ ಮಾಡುತ್ತಿರುವ ಲವ್ ಮಾಕ್ಟೈಲ್ ಸಿನಿಮಾದ ಖ್ಯಾತ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್’ಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡಿದ್ದು, ದಿನದಿಂದ ದಿನಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಚಂದನವನದ ನವದಂಪತಿ ಡಾರ್ಲಿಂಗ್ ಕೃಷ್ಣಾ ಹಾಗೂ ಅವರ ಪತ್ನಿ ಮಿಲನಾ ನಾಗರಾಜ್ ಅವರಿಗೂ ಮಹಾಮಾರಿ ಕೋವಿಡ್ ಪಾಸಿಟಿವ್ ಸೋಂಕು ಪತ್ತೆಯಾಗಿದೆ. ಈ ಕುರಿತು ಸ್ವತಃ ಡಾರ್ಲಿಂಗ್ ಕೃಷ್ಣಾ ಅವರೇ ತಮ್ಮ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಖಚಿತಪಡಿಸಿದ್ದಾರೆ.
ಮಿಲನಾ ಹಾಗೂ ನನ್ನ ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು, ಇಬ್ಬರಿಗೂ ಪಾಸಿಟಿವ್ ಸೋಂಕು ತಗುಲಿರುವುದು ದೃಢಪಟ್ಟಿದೆ. ನಮ್ಮೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತೇವೆಂದು ತಿಳಿಸಿದ್ದಾರೆ.
Related Articles
ಇನ್ನು ಇತ್ತೀಚಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ಅಜಯ್ ದೇವಗನ್, ಹಿರಿಯ ನಟ ಗೋವಿಂದ್ ಹಾಗೂ ನಟಿ ಕತ್ರಿನಾ ಕೈಫ್ ಸೇರಿದಂತೆ ಸಾಕಷ್ಟು ತಾರೆಯರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅಕ್ಷಯ್ ಕುಮಾರ್ ಅವರು ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ವಾಪಸ್ ಆಗಿದ್ದಾರೆ.