ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿಯಲ್ಲಿ ಖಾಲಿ ಇದ್ದ ಸದಸ್ಯ ಸ್ಥಾನಕ್ಕೆ ಸರಕಾರ ಚಿತ್ರನಟ ದರ್ಶನ್ ತೂಗುದೀಪ ಅವರನ್ನು ನೇಮಿಸಿ ಶನಿವಾರ ಆದೇಶ ಹೊರಡಿಸಿದೆ.
ದರ್ಶನ ತೂಗುದೀಪ ಅವರು ವನ್ಯಜೀವಿ ಛಾಯಾಗ್ರಾಹಕ ಹಾಗೂ ಪ್ರಾಣಿಶಾಸ್ತ್ರ ಪ್ರಾಧಿಕಾರದ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಈ ಹಿನ್ನೆಲೆಯಲ್ಲಿ ವನ್ಯಜೀವಿ ಮಂಡಳಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಅರಣ್ಯ ಹೊರಡಿಸಿರುವ ಸುತ್ತೂಲೆಯಲ್ಲಿ ತಿಳಿಸಲಾಗಿದೆ.
ಸದಸ್ಯರಾಗಿದ್ದ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಶಾಂತಾರಾಮ ಸಿದ್ದಿ ಅವರ ಬದಲು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ನೇಮಿಸಲಾಗಿದೆ.
ಇವರಿಬ್ಬರ ಸದಸ್ಯತ್ವದ ಅವಧಿ 2023ರ ಅಕ್ಟೋಬರ್ 15ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರಲಿದೆ ಅರಣ್ಯ ಇಲಾಖೆಯ ಅಧೀನ ಕಾರ್ಯದರ್ಶಿಗಳ ಪ್ರಕಟನೆ ತಿಳಿಸಿದೆ.