Advertisement

Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಂಚಿಕೊಂಡ ʼದಾಸʼ

10:34 AM Jan 15, 2025 | Team Udayavani |

ಬೆಂಗಳೂರು: ನಟ ದರ್ಶನ್‌ ಅವರು ಬರೋಬ್ಬರಿ 7 ತಿಂಗಳ ನಂತರ ತಮ್ಮ ಅಭಿಮಾನಿಗಳಿಗೆ, ಜನತೆಗೆ ಜಾಲತಾಣದ ಮೂಲಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

Advertisement

ಕಳೆದ ಜೂನ್‌ ನಿಂದ ಕೊಲೆ ಆರೋಪದ ಮೇಲೆ ಸೆರೆವಾಸ ಅನುಭವಿಸಿದ್ದ ಅವರು, ಕೊನೆಗೂ ತಮ್ಮ ಪ್ರೀತಿಪಾತ್ರರಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು-ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿ ಯನ್ನು ಬರಮಾಡಿಕೊಳ್ಳೋಣ’ ಎಂದು ಬರೆದುಕೊಂಡಿದ್ದು, ಕುದುರೆಯೊಂದಿಗಿನ ತಮ್ಮ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.

ಈ ಪೋಸ್ಟ್‌ ಮಾಡಿದ ಕೆಲವೇ ಗಂಟೆಯಲ್ಲಿ 4.66 ಲಕ್ಷಕ್ಕೂ ಅಧಿಕ ಲೈಕ್‌, 27 ಸಾವಿರಕ್ಕೂ ಅಧಿಕ ಕಮೆಂಟ್ಸ್‌ ಬಂದಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.