ನವದೆಹಲಿ: 200 ಕೋಟಿ ರೂ. ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ದೆಹಲಿಯ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
Advertisement
50 ಸಾವಿರ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಶ್ಯೂರಿಟಿ ಸಲ್ಲಿಸುವಂತೆಯೂ ಕೋರ್ಟ್ ಸೂಚಿಸಿದೆ.
ವಂಚಕ ಸುಕೇಶ್ ಚಂದ್ರಶೇಖರ್ ಪ್ರಮುಖ ಆರೋಪಿಯಾಗಿರುವ ಈ ಪ್ರಕರಣದಲ್ಲಿ ಇತ್ತೀಚೆಗೆ ಜಾರಿ ನಿರ್ದೇಶನಾಲಯ ಪೂರಕ ಆರೋಪಪಟ್ಟಿ ಸಲ್ಲಿಸಿತ್ತು. ಅದರಲ್ಲಿ ಜಾಕ್ವೆಲಿನ್‌ರನ್ನು ಆರೋಪಿ ಎಂದು ಉಲ್ಲೇಖಿಸಿತ್ತು.